ತಂದೆಯ ಸಾವಿನ ನೋವಿನಲ್ಲೂ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಅಣ್ಣ ತಂಗಿ

ಹಾವೇರಿ : ತಂದೆಯ ಸಾವಿನ ನೋವಿನಲ್ಲೂ ಅಣ್ಣ-ತಂಗಿಯರು ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆದಿರುವ ಘಟನೆ ಹಾವೇರಿಯಲ್ಲಿ ನಡೆದಿದ್ದು. ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು.

ವಿದ್ಯಾರ್ಥಿ ರಕ್ಷಿತಾ ಮತ್ತು ಧನರಾಜ್​ ಇಬ್ಬರು ತಮ್ಮ ಕುಟುಂಬದ ಜೊತೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ಪದ್ಮಾವತಿಪುರ ತಾಂಡಾದಲ್ಲಿ ವಾಸವಾಗಿದ್ದರು. ಆದರೆ ಇಂದು ಬೆಳಿಗ್ಗೆ ವಿದ್ಯಾರ್ಥಿಗಳ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂತಹ ಕಷ್ಟದ ಸಂದರ್ಭದಲ್ಲೂ ವಿದ್ಯಾರ್ಥಿಗಳಿಬ್ಬರು ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ :ತಂದೆಯ ಸಾವಿನ ನೋವಿನಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ

ತಂದೆಯ ಸಾವಿನ ನೋವಿನಲ್ಲೂ ವಿದ್ಯಾರ್ಥಿಗಳಿಬ್ಬರು ಹಾವೇರಿಯ ರಾಣೇಬೆನ್ನೂರು ನಗರದ ಪರೀಕ್ಷಾ ಕೇಂದ್ರಕ್ಕೆ ತೆರಳಿ ಹಿಂದಿ ಪರೀಕ್ಷೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿಯೊಬ್ಬ ತಂದೆಯ ಸಾವಿನಲ್ಲೂ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದನು.

RELATED ARTICLES

Related Articles

TRENDING ARTICLES