ಸಿಂಗಾಪುರ: ಆಂಧ್ರಪ್ರದೇಶದ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ 8 ವರ್ಷದ ಮಗ ಓದುತ್ತಿದ್ದ ಸಿಂಗಾಪುರ ಶಾಲೆಯಲ್ಲಿ ಏಕಾಏಕಿ ಬೆಂಕಿ ಅವಘಡ ಕಾಣಿಸಿಕೊಂಡಿದ್ದು. ಘಟನೆಯಲ್ಲಿ ಪವನ್ ಕಲ್ಯಾಣ ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಪವನ್ ಕಲ್ಯಾಣ ಅವರ ಕಿರಿಯ ಮಗ ಮಾರ್ಕ್ ಶಂಕರ್ ಓದುತ್ತಿದ್ದ ಸಿಂಗಾಪುರ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಶಂಕರ್ ಕೈ-ಕಾಲುಗಳಿಗೆ ಗಂಭೀರ ಗಾಯವಾಗಿದ್ದು. ಹೊಗೆಯ ಪರಿಣಾಮವಾಗಿ ಉಸಿರಾಟ ಸಮಸ್ಯೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸದ್ಯ ಪವನ್ ಕಲ್ಯಾಣ ಪುತ್ರನಿಗೆ ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ :ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ; ಯಾವ ಜಿಲ್ಲೆಗೆ, ಯಾವ ಸ್ಥಾನ
ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ ಹೆಂಡತಿ ಅನ್ನಾ ಸಿಂಗಪುರದಲ್ಲೇ ಇದ್ದಾರೆ. ಮಾರ್ಕ್ ಶಂಕರ್ ಕೂಡ ಸಿಂಗಾಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಪವನ್ ಕಲ್ಯಾಣ ಅಲ್ಲೂರಿ ಸೀತಾರಾಮ ರಾಜು (ಎಎಸ್ಆರ್) ಜಿಲ್ಲೆಯ ಮಾನ್ಯಂನಲ್ಲಿ ತಮ್ಮ ಕಾರ್ಯಕ್ರಮಗಳನ್ನು ಮುಗಿಸಿದ ನಂತರ ವಿಶಾಖಪಟ್ಟಣಂನಿಂದ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.