ಮಂಡ್ಯ : ಹೆಚ್ಡಿಕೆ ಮತ್ತು ಚೆಲುವರಾಯಸ್ವಾಮಿ ನಡುವಿನ ಟಾಕ್ ಫೈಟ್ ಮುಂದುವರಿದಿದ್ದು. ಕುಮಾರಸ್ವಾಮಿಯನ್ನು ಸಿಎಂ ಮಾಡೋದಕ್ಕೆ ನಾವು ಸಾಥ್ ಕೊಟ್ಟಿಲ್ಲ ಎಂದರೆ, ಹೆಚ್ಡಿಕೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂಬ ಹೇಳಿಕೆಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ದ ಎಂದು ಹೇಳಿದರು.
ಈ ಕುರಿತು ಮಂಡ್ಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ‘ದೇಶದಲ್ಲಿ ಯಾವ ಯಾವ ಪಕ್ಷಗಳಲಿದ್ದವರು ಎಲ್ಲೆಲ್ಲಿ ಹೋಗಿದ್ದಾರೆ. ಚಲುವರಾಯಸ್ವಾಮಿ ಎಲ್ಲಿ ಇದ್ರು ಎಲ್ಲಿ ಹೋಗಿದ್ದಾರೆ?. ಮೊದಲು ದೇಶದಲ್ಲಿ ಜೋಕರ್ ಸಂಸ್ಕೃತಿ ಪ್ರಾರಂಭ ಆಗಿದ್ದು ಕಾಂಗ್ರೆಸ್‌ನಿಂದ. ಹೀಗಾಗಿ ನಾನು ಚಲುವರಾಯಸ್ವಾಮಿ ಗೆ ಉತ್ತರ ಕೊಡಬೇಕಿಲ್ಲ ಎಂದು ಹೇಳಿದರು
ಇದನ್ನೂ ಓದಿ :ನೀರಿಗಾಗಿ ಜಡೆ ಹಿಡಿದು ಹೊಡೆದಾಡಿದ ನಾರಿಯರು
ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂಬ ವಿಚಾರದ ಕುರಿತು ಮಾತನಾಡಿದ ಕುಮಾರಸ್ವಾಮಿ ‘ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿ ಎಂಎಲ್‌ಎಗಳು ಬಂದ್ರಾ?.
ನಾನು ಚಲುವರಾಯಸ್ವಾಮಿ ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ. ನನ್ನನ್ನ ಮಂತ್ರಿ ಮಾಡಿ ಎಂದು ಮೂರು ಗಂಟೆವರೆಗೆ ನಿದ್ದೆ ಮಾಡಲು ಬಿಟ್ಟಿಲ್ಲ ಚಲುವರಾಯಸ್ವಾಮಿ. ಚಲುವರಾಯಸ್ವಾಮಿ ಮಂತ್ರಿ ಮಾಡಲು 50 ಜನ ಶಾಸಕರನ್ನು ಸೇರಿಸಿದ್ದೇನೆ. ನಾನು ಪಟ್ಟಿರುವ ಶ್ರಮವನ್ನು ಅವರು ಮರೆಯೋದು ಬೇಡ.
ಚಲುವರಾಯಸ್ವಾಮಿಗೆ ಇರುವ ಚಟ ನನಗೆ ಇಲ್ಲ. ಮಂಡ್ಯದಲ್ಲಿ ಚಲುವರಾಯಸ್ವಾಮಿ ಚಟಗಳ ಬಗ್ಗೆ ಕೇಳಿದ್ರೆ ಹೇಳ್ತಾರೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡಾ, ಅದು ಕೀಳುಮಟ್ಟದ ಅಭಿರುಚಿ. ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಗೊತ್ತು. ನಾನು ದುಡ್ಡು ಮಾಡಬೇಕೆಂದು ಆಸೆ ಪಟ್ಟಿಲ್ಲ. ನಾನು ಜನರ ಮಧ್ಯ 24 ಗಂಟೆ ಕೆಲಸ ಮಾಡಿದ್ದೇನೆ. ಜನತಾ ದರ್ಶನ, ಗ್ರಾಮ ವಾಸ್ತವ್ಯದಲ್ಲಿ ಬೆಳಗ್ಗಿನ ಜಾವದವರೆಗೆ ಕೆಲಸ ಮಾಡಿದ್ದೇನೆ. ಇದು ನನ್ನ ವೈಯಕ್ತಿಕ ಸಮಸ್ಯೆ. ಎಲ್ಲವನ್ನೂ ದೇವರು ನೋಡುತ್ತಾನೆ ಎಂದು ಹೆಚ್ಡಿಕೆ ಹೇಳಿಕೆ ನೀಡಿದರು.