Thursday, April 17, 2025

ಪೈಶಾಚಿಕ ಕೃತ್ಯ; 16 ವರ್ಷದ ಮಗಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ

ಗದಗ : ತಂದೆಯಿಂದಲೇ ಅಪ್ರಾಪ್ತೆ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಕಾಮುಕ ಪೈಶಾಚಿಕ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸುಮಾರು 55 ವರ್ಷದ ತಂದೆಯಿಂದ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ತಂದೆ ರಮೇಶ್ ಮೇಲೆ‌ ಈಗ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಅತ್ಯಾಚಾರ ನಡೆಸುತ್ತಿದ್ದ. ಅತ್ಯಾಚಾರ ನಂತರ ಯಾರಿಗೂ ಹೇಳದಂತೆ ಹೆದರಿಕೆ ಹಾಕುತ್ತಿದ್ದ.

ಇದನ್ನು ಓದಿ :ಗಂಡನನ್ನು ಬಿಟ್ಟು ಇನ್ಸ್ಟಾ ಗೆಳೆಯನ ಹಿಂದೆ ಹೋದ ಪತ್ನಿ; ರೀಲ್ಸ್​ನಲ್ಲಿ ಪತ್ನಿ ಮದುವೆ ನೋಡಿ ಗಂಡ ಶಾಕ್​

ಅಕಸ್ಮಾತ್ ಯಾರ ಮುಂದಾದ್ರು ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂಬ ಆರೋಪ ಸಂತ್ರಸ್ತೆ ಬಾಲಕಿಯದ್ದಾಗಿದೆ. ಸದ್ಯ ಆರೋಪಿ ತಂದೆ ರಮೇಶ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ‌ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES