ಬೆಂಗಳೂರು : ಮೂಡಾ ಹಗರಣದ ಆರೋಪದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು. ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದ ಆರೋಪ ಅವರ ವಿರುದ್ಧ ಕೇಳಿಬಂದಿದೆ, ಈ ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ಎಂಬುವವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಏನಿದು ಪ್ರಕರಣ..?
2015ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 8 ಗಣಿ ಗುತ್ತಿಗೆಗಳನ್ನು ನವೀಕರಣ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಅವರು 500 ಕೋಟಿ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಎಚ್.ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು. ಸಿಎಂ ನಿರ್ಧಾರದಿಂದ 5 ಸಾವಿರ ಕೋಟಿ ನಷ್ಟ ಆಗಿದೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ :ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಿ, ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ; ವಿಜಯೇಂದ್ರ
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದು. ಸಿಎಂ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ 1988ರ, ಸೆಕ್ಷನ್ 7, 9, 11, 12 ಮತ್ತು 15ರ ಅಡಿಯಲ್ಲಿ ಮತ್ತು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 228, 229, 239, 314, 316(5), 318(1), 319, 322, 324(2), 324(3), 335, 336, 338 ಅಡಿ ದೂರು ನೀಡಿದ್ದು. ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ನೀಡಿರುವ ದೂರಿನ ಬಗ್ಗೆ ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚಿಸಿದ್ದು. ನೀಡಿರುವ ದೂರಿನ ಪ್ರತಿ ಮೇಲೆ ಸಹಿ ಮಾಡಿ ಅದನ್ನು ಕಾನೂನು ವಿಭಾಗಕ್ಕೆ ಕಳುಹಿಸಿದ್ದಾರೆ. ಜೊತೆಗೆ ಸಾಲಿಸಿಟರ್ ಜನರಲ್ರೊಂದಿಗೆ ಚರ್ಚಿಸಿ ನಂತರ ನೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.