ಹಾಸನ : ವಿದ್ಯುತ್ ತಂತಿ ತಗುಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಮನೆಯೊಂದರಲ್ಲಿ ಮರಗೆಲಸ ಮಾಡಲು ಎಂದು ಬಂದಿದ್ದ ಇಬ್ಬರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಗರಿಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು. ಮಹೇಂದ್ರ ಎಂಬುವವರ ನೂತನ ಮನೆಯ ಮರಗೆಲಸಕ್ಕೆ ಎಂದು ಹುಲಿಕ ಲ್ ಹೋಬಳಿ ಸಿದ್ದಾಪುರ ಗ್ರಾಮದ ಸೃಜನ್ (19), ಸುಭಾಷ್ ನಗರದ ಸಂಜಯ್ (19) ಎಂಬುವವರು ಬಂದಿದ್ದರು. ಕೆಲಸ ಮಾಡುವಾಗ ಆಕಸ್ಮಿಕವಾಗಿ ಇಬ್ಬರಿಗೆ ವಿದ್ಯುತ್ ತಂತಿ ತಗುಲಿದ್ದು. ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ತಹವೂರ್ ರಾಣನ ಪೌರತ್ವ ರದ್ದುಗೊಳಿಸಿದ್ದೇವೆ, ಆತ ನಮ್ಮ ಪ್ರಜೆಯಲ್ಲ: ಪಾಕಿಸ್ತಾನ ವಿದೇಶಾಂಗ ಇಲಾಖೆ
ಘಟನೆ ಸಂಬಂಧ ಅರಕಲಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಯುವಕರ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಘಟನೆ ಕುರಿತು ಇನ್ನಷ್ಟೆ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.