ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಗರದ ಅಧಿ ದೇವತೆ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದು. ಮೆಜಸ್ಟಿಕ್ ಬಳಿಯ ಅಣ್ಣಮ್ಮನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಅಣ್ಣಮ್ಮ ದೇವಿಯ ಮಡಿಲು ತುಂಬಿ ತಮ್ಮ ಹರಕೆ ತೀರಿಸಿದ್ದಾರೆ.
ಇದನ್ನೂ ಓದಿ :ಯತ್ನಾಳ್ ತಲೆ ಕತ್ತರಿಸಬೇಕು; ಪ್ರಚೋದನಕಾರಿ ಆಡಿಯೋ ಹರಿಬಿಟ್ಟ ಕಿಡಿಗೇಡಿ
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದ ನಂತರ ನಿರಂತರವಾಗಿ ದೇವಾಲಯಕ್ಕೆ ಭೇಟಿ ನೀಡುತ್ತಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇದೀಗ ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಂಜಾನೆ 7 ಗಂಟೆಗೆ ಅಣ್ಣಮ್ಮ ದೇವಸ್ಥಾನಕ್ಕೆ ಬಂದ ವಿಜಯಲಕ್ಷ್ಮೀ ದೇವರಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ದಾರೆ. ಅಣ್ಣಮ್ಮನಿಗೆ ಮಡಿಲು ತುಂಬಿ ತಮ್ಮ ಹರಕೆ ತೀರಿಸಿದ್ದಾರೆ.