Sunday, April 13, 2025

BJP-AIADMK ಮೈತ್ರಿ; ಪಳನಿ ಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದ ಅಮಿತ್​ ಶಾ

ಚೆನ್ನೈ : ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮತ್ತೆ ಮೈತ್ರಿ ಮಾಡಿಕೊಂಡಿವೆ. ಇದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಚೆನೈಗೆ ಭೇಟಿ ನೀಡಿದ್ದು. ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲಿದೆ ಎಂದು ಹೇಳಿದ್ದಾರೆ.

ಚೆನೈನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಜಂಟಿ ಸುದ್ದಿಗೋಷ್ಟಿ ನಡೆಸಿದ್ದು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್​ ಶಾ “ನಾನು ನಿಮಗೆ ಶುಭ ಸುದ್ದಿಯನ್ನು ಹೇಳಲು ಬಂದಿದ್ದೇನೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಳನಿಸ್ವಾಮಿ ಎನ್‌ಡಿಎ ಮೈತ್ರಿಕೂಟವನ್ನು ಮುನ್ನಡೆಸಲಿದ್ದಾರೆ. ಈ ಚುನಾವಣೆಗಳು ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ನಡೆಯಲಿವೆ” ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ:RCB ಅಂದ್ರೆ ನಮ್​ ಜೀವ, ನಮ್​ ಪ್ರಾಣ; ಆರ್​​ಸಿಬಿ ಗುಣಗಾನ ಮಾಡಿದ ಶಿವಣ್ಣ

1998ರ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಯನ್ನು ಮತ್ತೊಮ್ಮೆ ನೆನಪಿಸಿದ್ದು. ಎಐಎಡಿಎಂಕೆ ನಾಯಕಿ ಜಯಲಲಿತಾ ಮತ್ತು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಒಟ್ಟಿಗೆ ಕೆಲಸ ಮಾಡಿದ್ದಾರೆ. “ತಮಿಳುನಾಡಿನಲ್ಲಿ ಎನ್‌ಡಿಎ ಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುತ್ತದೆ ಎಂಬ ಭರವಸೆ ನನಗಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಎಐಎಡಿಎಂಕೆ ಯಾವುದೇ ಷರತ್ತುಗಳು ಮತ್ತು ಬೇಡಿಕೆಗಳನ್ನು ನೀಡಿಲ್ಲ. ಇದನ್ನೂ ಓದಿ :ರಾಜ್ಯ ಸರ್ಕಾರ ಸ್ಥಗಿತಗೊಳಿಸಿದ್ದ ಬಲ್ಡೋಟ ಕಾರ್ಖಾನೆಗೆ ಕೇಂದ್ರ ಸರ್ಕಾರದಿಂದ ಗ್ರೀನ್​​ ಸಿಗ್ನಲ್​

ಎಐಎಡಿಎಂಕೆಯ ಆಂತರಿಕ ವಿಷಯಗಳಲ್ಲಿ ನಮಗೆ ಯಾವುದೇ ಹಸ್ತಕ್ಷೇಪವಿರುವುದಿಲ್ಲ. ಈ ಮೈತ್ರಿಕೂಟವು ಎನ್‌ಡಿಎ ಮತ್ತು ಎಐಎಡಿಎಂಕೆ ಎರಡಕ್ಕೂ ಪ್ರಯೋಜನಕಾರಿಯಾಗಲಿದೆ.ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆಯ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು, ದಲಿತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಮನಿಸಿ ಜನರು ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES