ರಾಮನಗರ : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು. ಘಟನೆಯಲ್ಲಿ 20ಕ್ಕು ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು. ಮಾಗಡಿ ತಾಲೂಕಿನ ಸೋಲೂರು ಸಮೀಪ ಘಟನೆ ಘಟಿಸಿದೆ. ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ರಸ್ತೆ ಬದಿಯಲ್ಲಿ ಟೈರ್ ಪಂಚರ್ ಆಗಿ ಕೆಟ್ಟು ನಿಂತಿದ್ದ ಕ್ಯಾಂಟರ್ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸಂಪೂರ್ಣ ಬಸ್ ನಜ್ಜುಗುಜ್ಜಾಗಿದ್ದು. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.
ಇದನ್ನೂ ಓದಿ :ಮೈಮುಟ್ಟಿ ಸ್ಕ್ಯಾನಿಂಗ್ ಮಾಡಿದ್ದಕ್ಕೆ ಹಲ್ಲೆ; ಮುಟ್ಟದೆ ಸ್ಕ್ಯಾನಿಂಗ್ ಹೇಗೆ ಮಾಡುವುದು ಎಂದು ವೈದ್ಯರ ಪ್ರತಿಭಟನೆ
ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ಜಖಂ ಆಗಿದ್ದು. ಬಸ್ ಮುಂಭಾಗ ಸಿಲುಕಿದ್ದ ಡ್ರೈವರ್ನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಘಾತದಲ್ಲಿ ಡ್ರೈವರ್ ಕೈ ಮುರಿದಿದ್ದು. ಬಸ್ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಸ್ಥಳಕ್ಕೆ ಸೋಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ.