ದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಮತ್ತೊಮ್ಮೆ ಇಡಿ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಇಂದು ನೋಟಿಸ್ ಜಾರಿ ಮಾಡಿದೆ.
ದೆಹಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬೈನ ಬಾಂದ್ರಾ ಪ್ರದೇಶದ ಆವರಣದಲ್ಲಿ ಮತ್ತು ಲಕ್ನೋದ ಬಿಶೇಶ್ವರ್ ನಾಥ್ ರಸ್ತೆಯಲ್ಲಿರುವ ಎಜೆಎಲ್ ಕಟ್ಟಡದಲ್ಲಿ ಶುಕ್ರವಾರ ಈ ನೋಟಿಸ್‌ಗಳನ್ನು ಅಂಟಿಸಲಾಗಿದೆ ಎಂದು ಫೆಡರಲ್ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ :ಗಡಿಯಲ್ಲಿ ಗುಂಡಿನ ಚಕಮಕಿ: ಉಗ್ರರನ್ನು ಹಿಮ್ಮಟ್ಟೆಸುತ್ತಿದ್ದ ವೀರಯೋಧ ಹುತಾತ್ಮ
ಏಪ್ರಿಲ್ 11ರಂದು ಕೇಂದ್ರ ತನಿಖಾ ಸಂಸ್ಥೆಯಾದ ಇಡಿ ದೆಹಲಿ, ಮುಂಬೈ ಮತ್ತು ಲಕ್ನೋದಲ್ಲಿನ ಆಸ್ತಿ ನೋಂದಣಿದಾರರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ನ ಆಸ್ತಿಗಳನ್ನು ಅಂದರೆ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಒಡೆತನದ ಕಂಪನಿಯಾದ ಯಂಗ್ ಇಂಡಿಯನ್ ಲಿಮಿಟೆಡ್ ಕಟ್ಟಡಗಳಿವೆ. ಅವುಗಳನ್ನು ಸ್ವಾಧೀನಕ್ಕೆ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ