Sunday, April 13, 2025

ದೀದಿ ನಾಡಲ್ಲಿ ವಕ್ಫ್​ ವಿರುದ್ದ ಪ್ರತಿಭಟನೆ; ವಾಹನಗಳಿಗೆ ಬೆಂಕಿ, ರೈಲಿನ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ: ವಕ್ಫ್​​ ತಿದ್ದುಪಡಿ ಕಾಯ್ದೆ 2024ನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಮುರ್ಷಿದಬಾದ್​ನಲ್ಲಿ ಮುಸ್ಲಿಮರ ಗುಂಪು ಪ್ರತಿಭಟನೆ ನಡೆಸಿದ್ದು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಘಟನೆಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ್ದು. ರೈಲುಗಳ ಮೇಲೆ ಕಲ್ಲು ತೂರಾಟ ನಡೆದಿದ್ದು. ಎರಡು ರೈಲುಗಳು ಜಖಂ ಆಗಿವೆ ಎಂದು ತಿಳಿದು ಬಂದಿದೆ.

ಶುಕ್ರವಾರ್ ಮಧ್ಯಹ್ನದ ಪ್ರಾಥನೆಯ ನಂತರ ಪ್ರತಿಭಟನೆ ಆರಂಭಾಗಿದ್ದು. ಸಂಜೆವೇಳೆಗೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಅಲ್ಪ ಸಂಖ್ಯಾತರ ಪ್ರಾಬಲ್ಯವಿರುವ ಮುರ್ಷಿದಬಾದ್​ನಲ್ಲಿ ಉದ್ವಿಗ್ನತೆ ಉಂಟಾಗಿದ್ದು. ಪ್ರತಿಭಟನಕಾರರು ವಾಹನಗಳಿಗೆ ಬೆಂಕಿ ಹಚ್ಚಿ, ರೈಲುಗಳ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಕೆಲವು ಪ್ರಯಾಣಿಕರು ಸೇರಿದಂತೆ ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ.

ಇದನ್ನೂ ಓದಿ :ಪ್ರೀತಿಸಿ, ಮದುವೆಯಾಗಲು ಬಂದಿದ್ದ ಪ್ರೇಮಿಗಳಿಗೆ ಹಿಗ್ಗಾ-ಮುಗ್ಗ ಥಳಿಸಿದ ಪೋಷಕರು

ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿರುವ ಕಿಡಿಗೇಡಿಗಳು, ರೈಲಿನ ಮೇಲೆ ದಾಳಿ ಮಾಡಿದಲ್ಲದೆ. ರೈಲು ಹಳಿಗಳನ್ನು ತಡೆದು, ರೈಲ್ವೇ ಆಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸ್​ ಸಿಬ್ಬಂದಿ ಲಾಠಿ ಪ್ರಹಾರ ಮಾಡಿದ್ದು. ಪ್ರತಿಭಟನನಿರತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಹಿಂಸಾಚಾರ ಮಾಡುವವರಿಗೆ ಎಚ್ಚರಿಕೆ ನೀಡಿದ್ದು, ಮುರ್ಷಿದಾಬಾದ್ ಮತ್ತು ಉತ್ತರ 24 ಪರಗಣಗಳ ಇತರ ಸ್ಥಳಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಗಲಭೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟನೆಯ ವಿಡಿಯೋಗಳನ್ನು ಹಾಕಿ ಮಮತಾ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಇದನ್ನು ಓದಿ :BJP-AIADMK ಮೈತ್ರಿ; ಪಳನಿ ಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದ ಅಮಿತ್​ ಶಾ

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಒಂದು ನಿರ್ದಿಷ್ಟ ಗುಂಪಿನ ತೀವ್ರಗಾಮಿಗಳಿಂದ ಪ್ರತಿಭಟನೆಗಳ ಹೆಸರಿನಲ್ಲಿ ರಾಜ್ಯವು ದೊಡ್ಡ ಪ್ರಮಾಣದ ಹಿಂಸಾಚಾರ, ಅರಾಜಕತೆ ಮತ್ತು ಕಾನೂನುಬಾಹಿರತೆಯನ್ನು ನೋಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

RELATED ARTICLES

Related Articles

TRENDING ARTICLES