ಬೆಂಗಳೂರು : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಮಾಡಿದ ಆರೋಪಿಗೆ ಎನ್ಕೌಂಟರ್ ಮಾಡಿದ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್. ರಾಜ್ಯದಲ್ಲಿ ಹೊರರಾಜ್ಯದಿಂದ ಬರುವವರಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತು ಕ್ರಮ ತೆಗೆದುಕೊಳ್ಳಲು ಕಾರ್ಮಿಕ ಇಲಾಖೆ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಎನ್ಕೌಟಂರ್ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್ ‘ ಆರೋಪಿ ಮಗುವನ್ನು ಎತ್ತಿಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಆತನನ್ನ ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗುವಾಗ. ಪೊಲೀಸರ ಮೇಲೆ ಅಟ್ಯಾಕ್ ಮಾಡಿದ್ದಾನೆ. ಪೊಲೀಸರು ಅವರ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಫೈರ್ ಮಾಡಿದ್ದಾರೆ. ಆದರೆ ಅದು ಆತನ ಬೆನ್ನಿಗೆ ಬಿದ್ದಿದೆ.
ಇದನ್ನೂ ಓದಿ : ಯುವತಿಯ ಎದೆ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ಸೇರಿಸಲು ಯತ್ನಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವಾಗಲೇ ಆತ ತೀರಿಕೊಂಡಿದ್ದಾನೆ. ಈ ಕುರಿತು ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ತನಿಖೆ ಮಾಡಿದ ನಂತರದಲ್ಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ :13ಸಾವಿರ ಕೋಟಿ ವಂಚಿಸಿ ಪರಾರಿಯಾಗಿದ್ದ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್
ಹೊರರಾಜ್ಯದವರಿಗೆ ಕಾನೂನಿಯ ಭಯ ಇಲ್ಲ
ರಾಜ್ಯದಲ್ಲಿ ಹೊರರಾಜ್ಯದಿಂದ ಬಂದವರಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು. ಈ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದು. “ಹೊರ ರಾಜ್ಯದವರು ಸಾಕಷ್ಟು ಜನ ಬೆಂಗಳೂರಿಗೆ ಬರುತ್ತಾರೆ. ಇಲ್ಲಿ ಬಂದವರಿಗೆ ಇಲ್ಲಿನ ಜನರ ಸಂಸ್ಕೃತು ಅವರ ಭಾವನೆ ಅರ್ಥವಾಗಲ್ಲವೋ ಏನೋ ಗೊತ್ತಿಲ್ಲ. ಹೊರ ರಾಜ್ಯದಿಂದ ಬಂದವರದ್ದೇ ಹೆಚ್ಚು ಪ್ರಕರಣಗಳನ್ನು ನೋಡುತ್ತಿದ್ದೇವೆ. ಸುಮಾರು ಕಡೆ ಕಟ್ಟಡ ಕಾರ್ಮಿಕರಿಂದ ಕ್ರೈಮ್ ಗಳು ಆಗಿದ್ದಾವೆ. ಇದರ ಬಗ್ಗೆ ಕ್ರಮಕ್ಕೆ ಕಾರ್ಮಿಕ ಇಲಾಖೆ ಮತ್ತು ನಾವು ಜಂಟಿಯಾಗಿ ಸಭೆ ಮಾಡುತ್ತೇವೆ ಎಂದು ಹೇಳಿದರು.