ಹುಬ್ಬಳ್ಳಿ : ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಹತ್ಯೆ ಮಾಡಿದ್ದ ಘಟನೆ ಸಂಬಂಧ ಬಾಲಕಿಯ ಅಂತ್ಯಕ್ರಿಯೆ ನೆರವೇರಿದ್ದು. ದೇವಾಂಗಪೇಟೆ ರುದ್ರಭೂಮಿಯಲ್ಲಿ ಕುರುಭ ಸಮುದಾಯದಂತೆ ಅಂತ್ಯಕ್ರಿಯೆ ನೆರವೇರಿದೆ. ಮುದ್ದು ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಬಾಲಕಿಯ ತಂದೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ನಿನ್ನೆ ಮಧ್ಯಹ್ನಾ ಬಿಹಾರ ಮೂಲದ ಆರೋಪಿ ರಿತೇಶಕುಮಾರ ಎಂಬಾತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದನು. ಬಾಲಕಿಯ ಕಿರುಚಾಟ ಕೇಳಿಸಿಕೊಂಡು ಸ್ಥಳೀಯರು ಬರುತ್ತಿರುವುದನ್ನು ಗಮನಿಸಿದ ಆರೋಪಿ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದನು. ಇದನ್ನು ಖಂಡಿಸಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಭಾರೀ ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ :ಜನರಿಂದ ಜಮೀನು ಕಿತ್ತುಕೊಳ್ಳಲ್ಲ, ಯಾರು ಆತಂಕ ಪಡಬೇಡಿ; ಪ್ರಮೋದ ದೇವಿ
ಆರೋಪಿ ಎನ್‌ಕೌಂಟರ್
ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್ ಕುಮಾರ್ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್ ಕುಮಾರ್ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್ ಕುಮಾರ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.