Tuesday, April 15, 2025

ಹಿರಿಯ ನಟ ಬ್ಯಾಂಕ್​ ಜನಾರ್ಧನ್​ ನಿಧನ; ತಂದೆಯ ಬಗ್ಗೆ ಮಗ ಹೇಳಿದ್ದೇನು

ಬೆಂಗಳೂರು : ಹಿರಿಯ ನಟ ಬ್ಯಾಂಕ್ ಜನಾರ್ಧನ್​ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಬ್ಯಾಂಕ್​ ಜನಾರ್ಧನ್​ ಪುತ್ರ ಗುರುಪ್ರಸಾದ್​ ‘ ಕಳೆದ 20 ದಿನಗಳಿಂದ ತಂದೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದರು.

ಬ್ಯಾಂಕ್​ ಜನಾರ್ಧನ್​ ಕನ್ನಡ ಚಿತ್ರರಂಗದ ಮೇರುನಟ. ಹಿರಿತೆರೆ, ಕಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜರ್ನಾಧನ್​ ಕಳೆದ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಬ್ಯಾಂಕ್​ ಜನಾರ್ಧನ್ ಪುತ್ರ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು. ‘ತಂದೆಯನ್ನ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಆದರೂ ಉಳಿಸಿಕೊಳ್ಳಲು ಆಗಲಿಲ್ಲ.ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದರೆ ಕಳೆದ ವಾರ ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದೆವು. ಮೂರು ದಿನಗಳಿಂದ ಆರೋಗ್ಯ ಸಮಸ್ಯೆ ಮತ್ತೆ ಏರುಪೇರು ಆಯ್ತು. ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದೆವು. ಆದೆರ ತುಂಬಾ ಉಸಿರಾಟ ಸಮಸ್ಯೆಯಿಂದ ಬೆಳಗಿನ ಜಾವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ :ಹೆಂಡತಿ ಕಿರುಕುಳ: ರಾಜಭವನದ ಎದುರು ಟೆಕ್ಕಿ ಆತ್ಮಹತ್ಯೆಗೆ ಯತ್ನ

ಕನ್ನಡದ ಮೇರು ನಟ ಬ್ಯಾಂಕ್​ ಜರ್ನಾಧನ್ 

1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಬೆಂಗಳೂರಿನಲ್ಲಿ ಜನಿಸಿದರು. 1985ರಲ್ಲಿ ಪಿತಾಮಹ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.ಅಲ್ಲದೆ, ಬೆಟ್ಟದ ತಾಯಿ, ಪೊಲೀಸ್ ಹೆಂಡತಿ, ತರ್ಲೆ ನನ್ಮಗ ಹೀಗೆ ಹಲವು ಚಿತ್ರಗಳಲ್ಲಿ ನಟಿಸಿದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ. 2022ರ ಮಠ ಹಾಗೂ 2023ರ ಉಂಡೇನಾಮ ಚಿತ್ರದಲ್ಲಿ ನಟಿಸಿದ್ದರು.

ಇದನ್ನೂ ಓದಿ :ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗದ ಪತ್ನಿ, ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಕಿರಾತಕ

ಹಿರಿತೆರೆ ಜೊತೆ ಕಿರುತೆರೆಯಲ್ಲಿಯೂ ಬ್ಯಾಂಕ್ ಜನಾರ್ಧನ್ ಕೆಲಸ ಮಾಡಿದ್ದಾರೆ. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ಕೂಡ ಬ್ಯಾಂಕ್ ಜನಾರ್ಧನ್ ಅವರು ನಟನೆ ಮಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು ದೊಡ್ಡಣ್ಣ, ಟೆನ್ನಿಸ್‌ ಕೃಷ್ಣ ಅವರೊಂದಿಗೆ ಅಷ್ಟೇ ಅಲ್ಲದೆ, ನಳಿಕ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್‌ ಪ್ರಕಾಶ್‌ ಸೇರಿದಂತೆ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು.

ಹೀಗೆ ಮೊದಲಿಗೆ ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಅವರು ದಿನಕಳೆದಂತೆ ದೊಡ್ಡಮಟ್ಟದಲ್ಲಿ ತಮ್ಮ ಅದ್ಭುತ ನಟನೆ ಮೂಲಕ ಗುರುತಿಸಿಕೊಳ್ಳುತ್ತಾ ಹೋದರು. ಈ ಮೂಲಕ ಅವರಿಗೆ ಬೇಡಿಕೆಯೂ ಹೆಚ್ಚಾಗಿತ್ತು.

RELATED ARTICLES

Related Articles

TRENDING ARTICLES