ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ನ ಸಾಗರೋತ್ತರ ಅಧ್ಯಕ್ಷ ಸ್ಯಾಮ್ ಪಿತ್ರೋಡ ವಿರುದ್ದ ಚಾರ್ಜಶೀಟ್ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದ್ದು. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಚಾರ್ಜಶೀಟ್ ಸಲ್ಲಿಕೆಯಾಗಿದ್ದು. ಇದೇ ಏಪ್ರೀಲ್ 25ಕ್ಕೆ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಪವಿತ್ರಾಗೌಡ
ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣ ದಾಖಲಾಗಿದ್ದು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮೂಲಕ ನ್ಯಾಷನಲ್ ಹೆರಾಲ್ಡ್‌ನ ಮೂಲ ಕಂಪನಿ ಎಜೆಎಲ್‌ನ ಆಸ್ತಿಗಳನ್ನು 2000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ವಂಚನೆಯಿಂದ ಸ್ವಾಧೀನಪಡಿಸಿಕೊಂಡಿದ್ದಾರೆ ದೂರಲಾಗಿದೆ. ಈ ಪ್ರಕರಣದ ತನಿಖೆಯನ್ನು 2021ರಿಂದ ಆರಂಭಿಸಲಾಗಿದೆ.