Tuesday, September 2, 2025
HomeUncategorizedಪೋಷಕರಿಗೆ ಗುಡ್​ ನ್ಯೂಸ್​ : ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲಗೊಳಿಸಿದ ಶಿಕ್ಷಣ ಇಲಾಖೆ

ಪೋಷಕರಿಗೆ ಗುಡ್​ ನ್ಯೂಸ್​ : ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲಗೊಳಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿದೆ. ಮೊದಲು 1ನೇ ತರಗತಿ ಸೇರ್ಪಡೆಗೆ ಕನಿಷ್ಟ 6 ವರ್ಷ ವಯೋಮಿತಿ ಇರಬೇಕೆಂಬ ನಿಯಮವನ್ನು ಸಡಿಲಗೊಳಿಸಿರುವ ಕರ್ನಾಟಕ ಶಿಕ್ಷಣ ಇಲಾಖೆ, ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ಇಳಿಕೆ ಮಾಡಿದೆ.

ಈ ಕುರಿತು ಮಾಧ್ಯಮ ಸುದ್ದಿಗೋಷ್ಟಿ ಕರೆದು ಸ್ಪಷ್ಟನೆ ನೀಡಿದ ಸಚಿವ ಮಧು ಬಂಗಾರಪ್ಪ ‘ಮಗುವಿಗೆ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ. ಎಸ್ಇಪಿ (State Education Policy) ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಇದು ಕೇವಲ ಈ ವರ್ಷಕ್ಕೆ ಮಾತ್ರ ಅನ್ವಯವಾಗಲಿದ್ದು. ಮುಂದಿನ ವರ್ಷದಿಂದ ವಯೋಮಿತಿ 6 ವರ್ಷವೇ ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ :ಪೈಪಲೈನ್​ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಮುಂದುವರಿದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ‘ವಯಸ್ಸಿನ ಮಿತಿಯ ಬಗ್ಗೆ ಎಲ್ಲರೂ ಒತ್ತಡ ಹೇರುತ್ತಾ ಇದ್ದರು. ಈ ವಿಚಾರದಲ್ಲಿ ಪೋಷಕರಿಗೆ ಒಂದು ಮನವಿಯನ್ನು ಮಾಡುತ್ತಿದ್ದೇನೆ. ಮಕ್ಕಳನ್ನು ಯಂತ್ರದ ತರ ಓದಿಸಬೇಡಿ. ಹಾಗೆ ಮಾಡಿದರೆ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತದೆ. ವಯೋಮಿತಿ ವಿಚಾರದಲ್ಲಿ ಪೋಷಕರು ಗೊಂದಲದಲ್ಲಿದ್ದಾರೆ. ದೇಶದಲ್ಲಿ ಎಲ್ಲ ಕಡೆಗಳಲ್ಲಿ ಒಂದನೇ ತರಗತಿ ಸೇರ್ಪಡೆಗೆ ಆರು ವರ್ಷ ವಯೋಮಿತಿ ಇದೆ ಆದರೆ ನಾವು ಮಾತ್ರ ಈ ಬಾರಿ ವಿನಾಯಿತಿ ನೀಡಿದ್ದೇವೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments