ಬೆಂಗಳೂರು: ಜಾತಿಗಣತಿ ವರದಿ ಕುರಿತು ಚರ್ಚೆ ನಡೆಸಲು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳದೆ ಸಂಪುಟ ಸಭೆ ಅಂತ್ಯವಾಗಿದ್ದು. ಅಕ್ಷೇಪ ಎತ್ತಿದ ಸಚಿವರಿಗೆ ಲಿಖಿತ ರೂಪದಲ್ಲಿ ವರದಿ ನೀಡಲು ಸಿಎಂ ಸಲಹೆ ನೀಡಿದ್ದಾರೆ. ಸಭೆಯಲ್ಲಿ ಅಹಿಂದ ಸಚಿವರು ಮತ್ತು ಒಕ್ಕಲಿಗ, ಲಿಂಗಾಯತ ನಾಯಕರ ನಡುವೆ ವಾಗ್ವಾದ ಏರ್ಪಟ್ಟಿದ್ದು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಜಾರಿ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಜಾತಿ ಗಣತಿ ಜಾರಿ ವಿಚಾರವಾಗಿ ರಾಜಕೀಯ ಸಮರ ತಾರಕಕ್ಕೇರಿದೆ. ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯ ಕುರಿತು ಭಿನ್ನಾಭಿಪ್ರಾಯ ಹೊಂದಿದ್ದಾರೆ.
ಇದನ್ನೂ ಓದಿ : ರಾಷ್ಟ್ರಪತಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಲು ಸಾಧ್ಯವಿಲ್ಲ: ಜಗದೀಪ್ ಧನಕರ್
ಈ ಎಲ್ಲ ಬೆಳವಣಿಗೆಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು. ಈ ಸಭೆ ಯಾವುದೇ ನಿರ್ಣಯ ಕೈಗೊಳ್ಳದೆ ಅಂತ್ಯವಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸುವುದಾಗಿ ತಿಳಿದು ಬಂದಿದೆ.
ಮೇ.02ಕ್ಕೆ ಅಂತಿಮ ನಿರ್ಧಾರ..!
ಸಚಿವ ಸಂಪುಟದಲ್ಲಿ ನಡೆದ ಚರ್ಚೆ ಬಗ್ಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಸುದ್ದಿಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದು.ಇವತ್ತಿನ ಸಭೆಯಲ್ಲಿ ‘ಜಾತಿಜನಗಣತಿ ದತ್ತಾಂಶ ಅಧ್ಯಯನ ವರದಿಯನ್ನ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಯ್ತು. ಈ ಕುರಿತು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಆದರೆ ಇನ್ನು ಹೆಚ್ಚಿನ ಮಾಹಿತಿ ಅವಶ್ಯಕತೆ ಇದೆ ಅನಿಸಿತು. ಅದನ್ನ ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ :ಅವನ್ಯಾವನೋ ಚಂಗ್ಲು ರೇಪ್ ಮಾಡಿ, ರಾಜ್ಯಪಾಲರಿಗೆ ಅರ್ಜಿ ಕೊಟ್ಟವ್ನೆ; ಡಿ.ಕೆ ಶಿವಕುಮಾರ್
ಆದ್ದರಿಂದ ಇವತ್ತಿನ ಚರ್ಚೆ ಅಪೂರ್ವವಾಗಿದೆ. ಕ್ಯಾಬಿನೆಟ್ ನಲ್ಲಿ ಹಲವಾರು ವಿಚಾರಗಳನ್ನ ಚರ್ಚೆ ಮಾಡಲಾಗಿದೆ. ಸಮೀಕ್ಷೆ ಮಾಡೋ ಸಂಧರ್ಭದಲ್ಲಿ ಏನೇನೂ ಪ್ಯಾರಮೀಟರ್ ತೆಗೆದುಕೊಂಡಿದ್ದಾರೆ ಎಂಬುದನ್ನ ಸ್ವಲ್ಪ ಮಟ್ಟಿಗೆ ಚರ್ಚಿಸಿಲಾಗಿದೆ.. ಮೇ 2ನೇ ತಾರೀಕಿನಂದು ನಡೆಯುವ ಕ್ಯಾಬ ಸಭೆಯಲ್ಲಿ ಜಾತಿಜನಗಣತಿ ಚರ್ಚೆ ನಡೆಸುತ್ತೇವೆ ಎಂದು ಎಚ್.ಕೆ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದರು.