ನವದೆಹಲಿ: ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಸೂದೆಗಳ ಕುರಿತು ನಿರ್ಧರಿಸಲು ರಾಷ್ಟ್ರಪತಿಗಳಿಗೆ ಸಮಯ ನಿಗದಿಪಡಿಸಿತ್ತು. 3 ತಿಂಗಳಿಗಿಂತ ಹೆಚ್ಚು ಸಮಯ ಮಸೂದೆಯನ್ನು ಒಪ್ಪಿಗೆ ನೀಡದೆ ಇರಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದೀಗ ಈ ಆದೇಶದ ಬಗ್ಗೆ ಉಪರಾಷ್ಟ್ರಪತಿ ಜಗಧೀಪ್ ಧನಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದು. “ನ್ಯಾಯಾಲಯಗಳು ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ” ಎಂದು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಳೆದ ವಾರ, ಸುಪ್ರೀಂ ಕೋರ್ಟ್ ಮೊದಲ ಬಾರಿಗೆ, ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳು ಮಸೂದೆಗಳನ್ನು ಸ್ವೀಕರಿಸಿದ ದಿನಾಂಕದಿಂದ ಮೂರು ತಿಂಗಳೊಳಗೆ ಅವುಗಳಿಗೆ ಅಂಕಿತ ಹಾಕಬೇಕು ಎಂದು ಗಡುವು ವಿಧಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿತ್ತು. ಇದನ್ನು ಉದ್ದೇಶಿಸಿ ಮಾತನಾಡಿದ ಜಗಧೀಪ್ ಧನಕರ್ “ಇತ್ತೀಚಿನ ತೀರ್ಪು ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಿದೆ. ಇದು ದೇಶದಲ್ಲಿ ಏನು ನಡೆಯುತ್ತಿದೆ, ನಾವು ಎಲ್ಲಿಗೆ ಹೋಗುತ್ತಿದ್ದೇವೆ? ದೇಶದಲ್ಲಿ ಏನು ನಡೆಯುತ್ತಿದೆ? ಎಂಬ ಬಗ್ಗೆ ಸೂಕ್ಷ್ಮವಾಗಿರಬೇಕೂ.
ಇದನ್ನೂ ಓದಿ :ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನ ದೂರ ಮಾಡಿದ ಪೋಷಕರು; ಚೆಲುವಿನ ಚಿತ್ತಾರ ಲವ್ಸ್ಟೋರಿ
ಭಾರತದ ರಾಷ್ಟ್ರಪತಿಗಳು ಬಹಳ ಉನ್ನತ ಸ್ಥಾನದಲ್ಲಿದ್ದಾರೆ ಅವರು ಸಂವಿಧಾನವನ್ನು ಸಂರಕ್ಷಿಸುವುದಾಗಿ, ರಕ್ಷಿಸುವುದಾಗಿ ಮತ್ತು ಸಮರ್ಥಿಸಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಉಪ ರಾಷ್ಟ್ರಪತಿಗಳು ಸೇರಿದಂತೆ ಸಚಿವರು, ಸಂಸದರು ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಪಾಲಿಸುವುದಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.ಈಗೀರುವಾಗ ನೀವು ಭಾರತದ ರಾಷ್ಟ್ರಪತಿಗಳಿಗೆ ನಿರ್ದೇಶಿಸುವ ಪರಿಸ್ಥಿತಿಯನ್ನು ನಾವು ನೋಡಲು ಸಾಧ್ಯವಿಲ್ಲ ಎಂದು ಹೇಳಿದರು.