Saturday, April 19, 2025

ಪ್ರೀತಿಸಿ ಮದುವೆಯಾದರೂ ತಪ್ಪದ ವರದಕ್ಷಿಣೆ ಕಿರುಕುಳ; ನವವಿವಾಹಿತೆ ಆತ್ಮಹ*ತ್ಯೆ

ಹಾಸನ: ಪತಿ ಮನೆಯವರ ವರದಕ್ಷಿಣೆ ಕಿರುಕುಳ ಸಹಿಸದೆ ನವವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು. ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು 21 ವರ್ಷದ ರಕ್ಷಿತಾ ಎಂದು ಗುರುತಿಸಲಾಗಿದೆ.

ಹಾಸನ ಜಿಲ್ಲೆಯ, ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಆಲೂರು ತಾಲ್ಲೂಕಿನ, ಹಳೇಪಾಳ್ಯ ಗ್ರಾಮದ ವೆಂಕಟೇಶ ಎಂಬುವವರ ಮಗಳು ರಕ್ಷಿತಾ ಅದೇ ಗ್ರಾಮದಲ್ಲಿ ವಾಸವಾಗಿದ್ದ ಪುನೀತ್​ ಎಂಬಾತನನ್ನು ಮೂರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗಳಿಬ್ಬರು ಕಣದಹಳ್ಳಿ ಗ್ರಾಮದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ವಾಸವಾಗಿದ್ದರು.

ಇದನ್ನೂ ಓದಿ :ಚೀನಾಗೆ ರಫ್ತು ಮಾಡಲು ಸಂಗ್ರಹಿಸಿಟ್ಟಿದ್ದ 400 ಕೆಜಿ ಕೂದಲು ಕಳ್ಳತನ

ಆದರೆ ವಿವಾಹದ ಬಳಿಕ ಪತಿ ಮನೆಯವರು ವರದಕ್ಷಿಣೆ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದರು. ಇದರಿಂದ ಮನನೊಂದಿದ್ದ ರಕ್ಷಿತಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಆಲೂರು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES