ರಾಯಚೂರು: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಕುರಿ ಖರೀದಿಸಲು ಎಂದು ಸಂತೆಗೆ ಹೋಗುತ್ತಿದ್ದ ನಾಲ್ವರು ಸಾವಿನ ಮನೆ ಸೇರಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ, ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು.ಕುರಿಗಳ ಖರೀದಿಗೆ ಹೊರಟಿದ್ದವರ ಬೊಲೆರೋ ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ ಬಳಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ :ಯಾವುದೇ ನಿರ್ಣಯ ಅಂಗೀಕರಿಸದೆ ಮುಕ್ತಾಯವಾದ ಸಚಿವ ಸಂಪುಟ ಸಭೆ; ಮೇ.02ಕ್ಕೆ ಅಂತಿಮ ಕ್ಲೈಮ್ಯಾಕ್ಸ್
ಮೃತರನ್ನು ನಾಗರಾಜ್, ಸೋಮ, ನಾಗಭೂಷಣ, ಮುರಳಿ ಎಂದು ಗುರುತಿಸಲಾಗಿದೆ. ಇನ್ನು ಚಾಲಕ ಆನಂದ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು. ಗಾಯಾಳುವನ್ನು ದೇವದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿ :ರಾಷ್ಟ್ರಪತಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಲು ಸಾಧ್ಯವಿಲ್ಲ: ಜಗದೀಪ್ ಧನಕರ್
ಪೊಲೀಸರ ಮಾಹಿತಿ ಪ್ರಕಾರ ನಡುರಾತ್ರಿ 2 ರಿಂದ 2:0ರ ಸಮಯದಲ್ಲಿ ಘಟನೆ ನಡೆದಿದ್ದು. ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ಮೂಲದವರೆಂದು ಗುರುತಿಸಲಾಗಿದೆ. ಹಿಂದೂಪುರದಿಂದ ಶಹಾಪೂರ ಸಂತೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಗಬ್ಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.