Saturday, May 10, 2025

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್; ಪ್ರಾಣಾಪಾಯದಿಂದ ಜಸ್ಟ್​​ ಮಿಸ್​​

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ (Muttappa Rai) ಕಿರಿಯ ಪುತ್ರ ರಿಕ್ಕಿ ರೈ (Ricky Rai) ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ಈ ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮುಸ್ಲಿಂರಿಗೆ ಹಂದಿ ಕಂಡ್ರೆ ಆಗಲ್ಲ, ಯಾಕೆಂದರೆ ಅವರು ಹಂದಿ ತರ ಮಕ್ಕಳನ್ನ ಹುಟ್ಟಿಸ್ತಾರೆ: ಪ್ರಮೋದ್ ಮುತಾಲಿಕ್​

ಏನಿದು ಘಟನೆ?

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್!

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ:

ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.

RELATED ARTICLES

Related Articles

TRENDING ARTICLES