Monday, April 21, 2025

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಪುಡ್​ ಡೆಲಿವರಿ ಬಾಯ್​ ಸಾ*ವು

ಹಾಸನ: ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪುಡ್​ ಡೆಲಿವರಿ ಬಾಯ್​ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 40 ವರ್ಷದ ಸತೀಶ್​​ ಎಂದು ಗುರುತಿಸಲಾಗಿದೆ.

ಸತೀಶ್​ ಭಾನುವಾರ ರಾತ್ರಿ 11 ಗಂಟೆಯಲ್ಲಿ ಫುಡ್ ಡೆಲಿವರಿ ಮಾಡಲು ಹಾಸನ ನಗರದಿಂದ ಗೆಂಡೆಗಟ್ಟೆಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸತೀಶ್​ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ವಿಡಿಯೋ ಬಿಡುಗಡೆ ಮಾಡುವುದಾಗಿ ಲವರ್​ ಬೆದರಿಕೆ: ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹ*ತ್ಯೆ

ಸತೀಶ್​ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಬಲವಾದ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿ ಸತೀಶ್​ ಸ್ಥಳದಲ್ಲೇ ಮೃತಪಟ್ಟದ್ದಾರೆ. ಮತ್ತೊಬ್ಬ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇನ್ನು ಮೃತ ಸತೀಶ್​ ಪತ್ನಿ ಮತ್ತು 11 ವರ್ಷದ ಮಗನನ್ನು ಅಗಲಿದ್ದಾರೆ.

RELATED ARTICLES

Related Articles

TRENDING ARTICLES