Tuesday, April 22, 2025

ಜಮ್ಮು ಕಾಶ್ಮೀರದಲ್ಲಿ ಭೀಕರ ಉಗ್ರ ದಾಳಿ: ಶಿವಮೊಗ್ಗ ಮೂಲದ ಉದ್ಯಮಿ ಸಾ*ವು

ಶಿವಮೊಗ್ಗ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಉಗ್ರ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಪ್ರವಾಸಿಗ ಮಂಜುನಾಥ್​ ಎಂಬಾತ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ :ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ: ಅಮಿತ್​ ಶಾ ನೇತೃತ್ವದಲ್ಲಿ ತುರ್ತು ಸಭೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ. ಮಂಜುನಾಥ್​ ತಮ್ಮ ಪತ್ನಿಯೊಂದಿಗೆ ಕಳೆದ 4 ದಿನಗಳ ಹಿಂದೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಇನ್ನು ಶಿವಮೊಗ್ಗದ ಮಂಜುನಾಥ್​ ಅವರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ :ಭೀಕರ ಭಯೋತ್ಪಾದಕ ದಾಳಿ: ಕರ್ನಾಟಕದ ಇಬ್ಬರು ಸೇರಿದಂತೆ 12 ಪ್ರವಾಸಿಗರಿಗೆ ಗುಂಡೇಟು

ಮಧ್ಯಾಹ್ನ 2:30 ಕ್ಕೆ ದಾಳಿ ನಡೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದು. ಲಷ್ಕರ್-ಎ-ತೊಯ್ಬಾದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (RTF) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇನ್ನು ಈ ಕುರಿತು ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ಕರೆದಿದ್ದು. ಪ್ರಧಾನಿ ಮೋದಿಯೊಂದಿಗೂ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES