ಬೆಂಗಳೂರು: ವಿಂಗ್ ಕಮಾಂಡರ್ ಮೇಲೆ ನಗರದಲ್ಲಿ ಪುಂಡರು ಹಲ್ಲೆ ನಡೆಸಿದ್ದಾರೆ ಎಂಬ ವಿಷಯ ನೆನ್ನೆ(ಏ.22) ರಾಷ್ಟ್ರವ್ಯಾಪ್ತಿ ಸುದ್ದಿಯಾಗಿತ್ತು. ಆದರೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು. ತಾನೇ ಹಲ್ಲೆ ನಡೆಸಿ ಸುಳ್ಳು ಕಥೆ ಕಟ್ಟಿದ್ದ ವಿಂಗ್ ಕಮಾಂಡರ್ ಶಿಲಾದಿತ್ಯಾ ಬೋಸ್ ವಿರುದ್ದ ಕೊನೆಗೂ ಎಫ್‌ಐಆರ್ ದಾಖಲಾಗಿದೆ.
ಹಲ್ಲೆಗೊಳಗಾದ ವಿಕಾಸ್ ನೀಡಿದ ದೂರಿನ ಆಧಾರದಲ್ಲಿ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಂಗ್ ಕಮಾಂಡರ್ ವಿರುದ್ದ ಪ್ರಕರಣ ದಾಖಲಾಗಿದ್ದು. ಬಿಎನ್‌ಎಸ್ ಸೆಕ್ಷನ್ 109ರ ಅಡಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಇದರ ಬಿಎನ್ಎಸ್ನ ವಿವಿಧ ಸೆಕ್ಷನ್ಗಳ ಅಡಿ ಶಿಲಾಧಿತ್ಯ ಬೋಸ್ ವಿರುದ್ದ ಪ್ರಕರಣ ದಾಖಲಾಗಿದೆ. ಕನ್ನಡಿಗನ ಮೇಲೆ ಆಗಿರುವ ಹಲ್ಲೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿಕೊಂಡಿವೆ.
ಇದನ್ನೂ ಓದಿ :ಇಂಧನ ಇಲಾಖೆಯಲ್ಲಿ ಸಾವಿರಾರು ಕೋಟಿ ಹಗರಣ: ಸಚಿವ ಜಾರ್ಜ್ ವಿರುದ್ದ ಲೋಕಾಯುಕ್ತಗೆ ದೂರು
ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 109(ಕೊಲೆಯತ್ನ), 115(2)(ಮಾರಣಾಂತಿಕ ಹಲ್ಲೆ), 304(ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324(ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶ ಪೂರಕವಾಗಿ ಹಾಳು ಮಾಡುವುದು), 352 (ಶಾಂತಿ ಭಂಗ)ಸೆಕ್ಷನ್ ಅಡಿ ಎಫ್‌ಐಆರ್ ದಾಖಲಾಗಿದೆ.
ವಿಕಾಸ್ ನೀಡಿದ ದೂರಿನಲ್ಲಿ ಏನಿದೆ..!
ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಕಾಸ್ ದೂರು ನೀಡಿದ್ದು. “ಸೋಮವಾರ ಬೆಳಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್ ಫ್ಯಾಕ್ಟರಿಯ ಬಳಿ ಬೈಕ್‌ಗೆ ಕಾರು ತಾಗಿದೆ. ಇದಕ್ಕೆ ಕಾರನ್ನು ಅಡ್ಡ ಹಾಕಿ ಗುದ್ದಿದ್ದು ಯಾಕೆ ಎಂದು ಕೇಳಿದೆ. ಪ್ರಶ್ನೆ ಮಾಡಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾನೆ.