Sunday, August 24, 2025
Google search engine
HomeUncategorizedಭಾಷೆ ವಿಚಾರಕ್ಕೆ ಇತರರ ಮೇಲೆ ಹಲ್ಲೆ ಮಾಡುವ ಸಣ್ಣತನ ಕನ್ನಡಿಗರದ್ದಲ್ಲ: ಸಿಎಂ ಸಿದ್ದರಾಮಯ್ಯ

ಭಾಷೆ ವಿಚಾರಕ್ಕೆ ಇತರರ ಮೇಲೆ ಹಲ್ಲೆ ಮಾಡುವ ಸಣ್ಣತನ ಕನ್ನಡಿಗರದ್ದಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೈಕ್​ ಸವಾರನೊಬ್ಬನಿಗೆ ವಿಂಗ್​ ಕಮಾಂಡರ್ ಹಲ್ಲೆ ನಡೆಸಿದ ಘಟನೆ ರಾಷ್ಟ್ರವ್ಯಾಪ್ತಿ ಸಂಚಲನ ಮೂಡಿಸಿದ್ದು. ಇದೀಗ ಈ ಕುರಿತು ಕರ್ನಾಟಕ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಟ್ವಿಟ್​ ಮಾಡುವ ಮೂಲಕ ವಿಂಗ್​ ಕಮಾಂಡರ್ ಹಲ್ಲೆಯನ್ನು ಖಂಡಿಸಿದ್ದಾರೆ. ಅಷ್ಟೇ ಅಲ್ಲದೆ ಭಾಷೆ ವಿಚಾರಕ್ಕೆ ಅನ್ಯರ ಮೇಲೆ ಹಲ್ಲೆ ನಡೆಸುವ ಸಣ್ಣತನ ಕನ್ನಡಿಗರಿಗೆ ಇಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಟ್ವಿಟ್​ ಮಾಡಿದ್ದು. ‘ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ. ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ.

ಇದನ್ನೂ ಓದಿ :ಗತಿ ಇಲ್ಲದೆ ಕರ್ನಾಟಕಕ್ಕೆ ಬಂದಿರುವ ನೀವೂ ಕನ್ನಡ ಕಲಿಯಲ್ಲ ಅಂದ್ರೆ ಹೇಗೆ: ಪ್ರತಾಪ್​ ಸಿಂಹ

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ. ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು.

ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments