ಬಳ್ಳಾರಿ: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು. ಒಂದೇ ಮರದ ಕೊಂಬೆಗೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮೀ (18) ಹಾಗೂ ಬಂಡ್ರಿ ಗ್ರಾಮದ ದೀಪಿಕಾ (18) ಎಂದು ಗುರುತಿಸಲಾಗಿದೆ.
ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಆದರೆ ಇವರಿಬ್ಬರು ಏಪ್ರೀಲ್.15ರಂದು ಪಿಯುಸಿ ಪರೀಕ್ಷೆ ಫಲಿತಾಂಶ ಬಂದ ದಿನ ನಾಪತ್ತೆಯಾಗಿದ್ದರು. ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದುಕೊಂಡಿದ್ದ ಇಬ್ಬರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ಇದೀಗ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗೆ ಇರುವ ಅರಣ್ಯದಲ್ಲಿ ಘಟನೆ ಇಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ರಾಹುಲ್ ಗಾಂಧಿಗೆ ಹೊರ ದೇಶದಲ್ಲಿ ಹೇಗೆ ನಡೆದುಕೊಳ್ಳಬೇಕೂ ಎಂಬುದು ಗೊತ್ತಿಲ್ಲ: ವಿಜಯೇಂದ್ರ
ಘಟನಾ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ, ಪರಶೀಲನೆ ನಡೆಸಿದರು. ಪ್ರೇಮಿಗಳಿಬ್ಬರು ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.