ಟಾಲಿವುಡ್ನ ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ನಗದು ರೂಪದಲ್ಲಿ 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ :ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ವಿವಾಹ: ವಶೀಕರಣ ಮಾಡಿದ್ದಾರೆ ಎಂದು ಆರೋಪಿಸಿದ ತಂದೆ
ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿರುವ ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಇದೇ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ಮಹೇಶ್ ಬಾಬು ನಟಿಸಿದ್ದರು. ಇದಾದ ನಂತರ ಈ ಬೆಳವಣಿಗೆ ನಡೆದಿದ್ದು. ಏಪ್ರೀಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬುರನ್ನು ವಿಚಾರಣೆಗೆ ಕರೆದಿದ್ದಾರೆ.
ಇಡಿ ದಾಳಿಯ ವೇಳೆ ಸುರಾನ್ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರೋದು ಬೆಳಕಿಗೆ ಬಂದಿದೆ. ರಿಯಲ್ ಎಸ್ಟೇಟ್ ಡೀಲಿಂಗ್ ವೇಳೆ ಈ ಅಕ್ರಮ ಎಸೆಗಲಾಗಿದೆ. ಇದರಲ್ಲಿ ಮಹೇಶ್ ಬಾಬು ಅವರ ಶಾಮೀಲಾಗಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯಲಿದೆ.
ಇದನ್ನೂ ಓದಿ:ಕನ್ನಡಿಗನ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ದ ಕೊಲೆಯತ್ನ ಪ್ರಕರಣ ದಾಖಲು
ಮಹೇಶ್ ಬಾಬು ಅವರು ಇದರ ಪ್ರಚಾರ ಮಾಡಿದ್ದರಿಂದ ಅನೇಕರು ಇದರಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿರುವ ಸಾಧ್ಯತೆ ಇರುತ್ತದೆ. ಸದ್ಯ ಮಹೇಶ್ ಬಾಬು ಅವರ ಶಾಮೀಲು ನೇರವಾಗಿ ಇಲ್ಲದೆ ಇದ್ದರು, ಅವರು ಪಡೆದ ಜಾಹೀರಾತಿನ ಹಣದ ಬಗ್ಗೆ ತನಿಖೆ ನಡೆಯಲಿದೆ.