Tuesday, April 22, 2025

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿ: 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು. ಅಪಘಾತದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ರಾಮನಗರದ, ಕನಕಪುರ ತಾಲ್ಲೂಕಿನ ಸಂಗಮದ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು. ಸಂಗಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ. ಕೋಡಿಹಳ್ಳಿ ಬಳಿಯ ಹಲಸೂರು ಬಳಿ ನಡೆಯುತ್ತಿದ್ದ ಕ್ರಿಶ್ಚಿಯನ್ ಜಾತ್ರೆಗೆ ಬಂದಿದ್ದ ಬೆಂಗಳೂರು ಮೂಲದ 50 ಪ್ರವಾಸಿಗರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಭೀಕರ ಭಯೋತ್ಪಾದಕ ದಾಳಿ: ಕರ್ನಾಟಕದ ಇಬ್ಬರು ಸೇರಿದಂತೆ 12 ಪ್ರವಾಸಿಗರಿಗೆ ಗುಂಡೇಟು

50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು. 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಘಟನ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES