ನವದೆಹಲಿ : ಕೇಂದ್ರ ನಾಗರಿಕ ಸೇವಾ ಆಯೋಗದ(UPSC) ನಾಗರಿಕ ಸೇವೆಗಳ 2024ರ ಫಲಿತಾಂಶ ಬಿಡುಗಡೆಯಾಗಿದ್ದು. ಒಟ್ಟು 1009 ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಯಾಗ್ರಾಜ್ನ ಶಕ್ತಿ ದುಬೆ ಎಂಬುವವರು ಅಖಿಲ ಭಾರತ ಮಟ್ಟದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.
ಅಭ್ಯರ್ಥಿಗಳು UPSC ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ರೋಲ್ ನಂಬರ್ ಮತ್ತು ಹೆಸರಿನ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.
ಇದನ್ನೂ ಓದಿ: ಅಕ್ರಮ ಸಂಬಂಧ: ಮದುವೆ ಮಾಡಿಕೋ ಎಂದಿದ್ದಕ್ಕೆ ಪ್ರಿಯತಮೆಗೆ ಗುಂಡಿ ತೋಡಿದ ಖದೀಮ
UPSC ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ 2845 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗಿತ್ತು. ಅಭ್ಯರ್ಥಿಗಳ ಸಂದರ್ಶನವನ್ನು 07 ಜನವರಿ 2025 ರಿಂದ 17 ಏಪ್ರಿಲ್ 2025 ರ ನಡುವೆ ನಡೆಸಲಾಗಿತ್ತು. ಇದೀಗ ಇದರ ಫಲಿತಾಂಶ ಪ್ರಕಟವಾಗಿದ್ದು. 1009 ಮಂದಿ ಕೇಂದ್ರ ಲೋಕಸೇವಾ ಆಯೋಗದ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.
2024ರ ಸಾಲಿನ ಯುಪಿಎಸ್ಸಿ ಪರೀಕ್ಷೆಗೆ ಒಟ್ಟು 13 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು. ಈ ಪೈಕಿ 1009 ಅಭ್ಯರ್ಥಿಗಳು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.