ದೆಹಲಿ : ನಿನ್ನೆ (ಏ.22) ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನ ಪ್ರವಾಸಿಗರು ಸಾವನ್ನಪ್ಪಿದ್ದು. ಘಟನೆ ಭಾರತ ಕ್ರಿಕೆಟ್ ತಂಡ ಆಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2019ರ ನಂತರ ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಎಂದು ಇದನ್ನು ವಿಶ್ಲೇಷಿಸಿದ್ದು. ಘಟನೆ ಕುರಿತು ದೇಶದೆಲ್ಲಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಭಾರತೀಯ ಕ್ರಿಕೆಟಿಗ ಶುಭಮನ್ ಗಿಲ್, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ, ಪಾರ್ಥಿವ ಪಟೇಲ್, ಯುವರಾಜ್ ಸಿಂಗ್, ಸೌರವ್ ಗಂಗೂಲಿ ಸೇರಿದಂತೆ ಅನೇಕ ಕ್ರಿಕೆಟಿಗರು ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶುಭಮನ್ ಗಿಲ್ ಟ್ವಿಟ್ ಮಾಡಿದ್ದು. ‘”ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಗ್ಗೆ ಕೇಳಿ ಹೃದಯ ವಿದ್ರಾವಕವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನ ಆ ದೇವರು ನೀಡಲಿ. ಈ ರೀತಿಯ ಹಿಂಸಾಚಾರಕ್ಕೆ ನಮ್ಮ ದೇಶದಲ್ಲಿ ಸ್ಥಾನವಿಲ್ಲ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ :ಉಗ್ರ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಶ್ರದ್ದಾಂಜಲಿ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ
ಇನ್ನು ಘಟನೆ ಕುರಿತು ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ ಈ ಕುರಿತು ಎಕ್ಷ್ನಲ್ಲಿ ಬರೆದುಕೊಂಡಿದ್ದು. “ಘಟನೆಯಲ್ಲಿ ಮೃತಪಟಟ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಈ ಘಟನೆಗೆ ಕಾರಣರಾದವರ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ” ಎಂದು ಬರೆದುಕೊಂಡಿದ್ದಾರೆ. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದು. ಘಟನೆಗೆ ಕಾರಣರಾದವರ ವಿರುದ್ದ ಭಾರತ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೂ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ :ಸೈಫುಲ್ಲಾ ಖಾಲಿದ್: ಪಹಲ್ಗಾಮ್ ಉಗ್ರದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಹಿನ್ನಲೆ ಏನು..?