Monday, September 1, 2025
HomeUncategorizedಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: 3647 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗೆ ಅನುಮೋದನೆ

ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: 3647 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗೆ ಅನುಮೋದನೆ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು. ಸಭೆಯ ನಂತರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಒಟ್ಟು 3647.42 ಕೋಟಿ ಮೌಲ್ಯದ ಅಭಿವೃದ್ದಿ ಕಾರ್ಯಗಳಿಗೆ ಕ್ಯಾಬಿನೆಟ್​ ಅನುಮೋದನೆ ದೊರೆತಿದೆ ಎಂದು ಹೇಳಿದರು.

ಕಳೆದ ನಾಲ್ಕೈದು ತಿಂಗಳ ಹಿಂದೆಯಿಂದಲೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್​ ಸಭೆ ನಡೆಸಬೇಕೂ ಎಂಬ ಚರ್ಚೆ ನಡೆಯುತ್ತಿತ್ತು. ಇದೀಗ ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್​ ಸಭೆ ನಡೆದಿದ್ದು. ಕ್ಯಾಬಿನೆಟ್​ನಲ್ಲಿ ನಡೆದ ಚರ್ಚೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ, ಬಿಜಾಪುರ ಮತ್ತು ನಂದಿಬೆಟ್ಟದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ :ಪಹಲ್ಗಾಂನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಮಂಜುನಾಥ್​​ ಪಂಚಭೂತಗಳಲ್ಲಿ ಲೀನ

ಮುಂದುವರಿದು ಮಾತನಾಡಿದ  ಸಿದ್ದರಾಮಯ್ಯ ‘ಕ್ಯಾಬಿನೆಟ್​ ಆರಂಭಕ್ಕೂ ಮೊದಲು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಎಂದು ಹೇಳಿದರು.

ಕ್ಯಾಬಿನೆಟ್​ ಸಭೆಯಲ್ಲಿನ ಪ್ರಮುಖ ಅಂಶಗಳು..!

  1. 3647.42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.
  2. 1787 ಕೋಟಿ ಹಣ ನೀರಾವರಿಗೆ ಮತ್ತು sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.
  3. ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ನಿರ್ಮಾಣ
  4. ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್​ಗಳ ಜಿಲ್ಲಾಸ್ಪತ್ರೆ.
  5. ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.
  6. ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.
  7. ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.
  8. ವರುಣಾದ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ
  9. 40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.
  10. ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.
  11. ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.
  12. ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.
  13. ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ
  14. ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.
  15. ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments