Thursday, April 24, 2025

ಭಯೋತ್ಪಾದಕರಷ್ಟೇ ಅಲ್ಲಾ, ಅವರಿಗೆ ಬೆಂಬಲ ಕೊಡುವವರನ್ನು ಬಿಡೋದಿಲ್ಲ: ನರೇಂದ್ರ ಮೋದಿ

ಬಿಹಾರ್​: ಜಮ್ಮು&ಕಾಶ್ಮೀರದ ಪಹಲ್ಗಾಮ್​ ನಡೆದ ಉಗ್ರ ದಾಳಿಯ ಬಗ್ಗೆ ಮೊದಲ ಭಾರಿಗೆ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿ ಮಾತನಾಡಿದ್ದು. ಪಾಕಿಸ್ತಾನದ ಭಯೋತ್ಪಾದಕರು ಮತ್ತು ಭಯೋತ್ಪಾದನೆಗೆ ನೆರವು ನೀಡುವವರಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ. ‘ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದವರ ಮತ್ತು ದಾಳಿಗೆ ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ’ ಎಂದು ಮೋದಿ ಗುಡುಗಿದ್ದಾರೆ.

ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY–NRLM) ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನಾಗರಿಕರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಭಾಷಣ ಆರಂಭಿಸಿದರು.”ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡೀ ಜಗತ್ತಿಗೆ ಹೇಳುತ್ತೇನೆ. ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ ಪತ್ತೆಹಚ್ಚುತ್ತದೆ ಮತ್ತು ಶಿಕ್ಷಿಸುತ್ತದೆ” ಎಂದು ಹೇಳಿದರು. ಇದನ್ನೂ ಓದಿ :ಭಾರತದ ಮೇಲೆ ಉಗ್ರ ದಾಳಿ: ಕೇಕ್​ ತಿಂದು ಸಂಭ್ರಮಿಸಿದ ಪಾಕ್​ ರಾಯಭಾರಿ ಕಛೇರಿ ಸಿಬ್ಬಂದಿಗಳು..!

ಮುಂದುವರಿದು ಮಾತನಾಡಿದ ಮೋದಿ ‘ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ್ದರಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ. ಈ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲು ಸಾಧ್ಯವಾಗದಷ್ಟು ದೊಡ್ಡ ಶಿಕ್ಷೆ ಸಿಗುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿ ಈಗ ಭಯೋತ್ಪಾದನೆಯ ಮಾಸ್ಟರ್‌ಗಳ ಬೆನ್ನು ಮುರಿಯಲಿದೆ

ಇದನ್ನೂ ಓದಿ :ಕನ್ನಡಿಗರ ರಕ್ಷಣೆಯಲ್ಲಿ, ಕರ್ನಾಟಕ ಸರ್ಕಾರ ಸ್ವಂದಿಸಿದ ರೀತಿ ಶ್ಲಾಘನೀಯ: ಥಾವರ್​ ಚಂದ್​ ಗೆಹ್ಲೋಟ್​

ಈ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ. ಕಾರ್ಗಿಲ್​ನಿಂದ ಕಾಶ್ಮೀರದವರೆಗೂ ಎಲ್ಲರೂ ಒಂದೇ ನೋವಿನಲ್ಲಿದ್ದಾರೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ವಿವಿಧ ದೇಶಗಳ ಜನರಿಗೆ ಮತ್ತು ಅವರ ನಾಯಕರು ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.

 

RELATED ARTICLES

Related Articles

TRENDING ARTICLES