ಅಮೆರಿಕಾ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ಘಟನೆ ಬಗ್ಗೆ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ ಮತ್ತು ಪಾಕಿಸ್ತಾನದ ನಡುವೆ “ಯಾವಾಗಲೂ ಉದ್ವಿಗ್ನತೆ ಇದೆ”, ಆದರೆ ಎರಡು ದೇಶಗಳು ನನಗೆ ತುಂಭಾ ಹತ್ತಿರದ ದೇಶಗಳು ಎಂದು ಹೇಳಿದರು.
ನಿನ್ನೆ (ಏ.25) ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ “ನಾನು ಭಾರತಕ್ಕೂ ತುಂಬಾ ಹತ್ತಿರವಾಗಿದ್ದೇನೆ ಮತ್ತು ಪಾಕಿಸ್ತಾನಕ್ಕೂ ತುಂಬಾ ಹತ್ತಿರವಾಗಿದ್ದೇನೆ, ನಿಮಗೆ ತಿಳಿದಿರುವಂತೆ. ಮತ್ತು ಅವರು ಕಾಶ್ಮೀರದಲ್ಲಿ 1,000 ವರ್ಷಗಳಿಂದ ಆ ಹೋರಾಟವನ್ನು ನಡೆಸಿದ್ದಾರೆ. ಬಹುಶಃ ಅದಕ್ಕಿಂತಲೂ ಹೆಚ್ಚು ಸಮಯದಿಂದಲೂ ಹೋರಾಟ ನಡೆಸುತ್ತಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ :ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಅಗ್ನಿ ಅವಘಡ: 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಪಹಲ್ಗಾಂನಲ್ಲಿ ನಡೆದ ದಾಳಿಯ ಬಗ್ಗೆ ಮಾತನಾಡಿದ ಟ್ರಂಪ್ ‘ಪಹಲ್ಗಾಂನಲ್ಲಿ ನಡೆದ ಉಗ್ರ ದಾಳಿ ಬಹಳ ಕೆಟ್ಟದಾಗಿತ್ತು. ಇದು ಇತ್ತೀಚಿನ ದಿನಗಳಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಮಾರಕ ದಾಳಿಯಾಗಿದೆ. ಆ ಗಡಿಯಲ್ಲಿ 1,500 ವರ್ಷಗಳಿಂದ ಉದ್ವಿಗ್ನತೆ ಇದೆ. ಆದರೆ ಅದನ್ನು ಆ ದೇಶದ ನಾಯಕರು ಸರಿಪಡಿಸುತ್ತಾರೆ. ಇದರ ಬಗ್ಗೆ ನನಗೆ ಖಚಿತವಿದೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದರು.