Monday, April 28, 2025

ಮೆಡಿಕಲ್​ ವೀಸಾ ಪಡೆದು ರಾಜ್ಯದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು

ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ದಾಳಿಯ ಬಳಿಕ ಭಾರತ ಅನೇಕ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದು. ಅದರಲ್ಲಿ ಭಾರತದಲ್ಲಿದ್ದ ಪಾಕ್​ ಪ್ರಜೆಗಳನ್ನು ಹೊರಹಾಕುವುದು ಸೇರಿದೆ. ಅದರಂತೆ ಕೇಂದ್ರ ಸರ್ಕಾದ ಆದೇಶದ ಮೇರೆಗೆ ಕರ್ನಾಟಕದಲ್ಲಿ ನೆಲೆಸಿದ್ದ ಪಾಕ್​ ಪ್ರಜೆಗಳನ್ನು ಹೊರ ಹಾಕಲಾಗುತ್ತಿದ್ದು. ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು  ಮಾಡಲಾಗಿದೆ.

ಅಷ್ಟೇ ಅಲ್ಲದೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ  91 ಮಂದಿ ಪಾಕ್​ ಪ್ರಜೆಗಳು ವಾಸವಾಗಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರವು ವಿನಾಯಿತಿ ನೀಡಿದ್ದು, ಗಡುವಿನೊಳಗೆ ನಿಯಮಾನುಸಾರ ಹೊರ ಕಳುಹಿಸಲಾಗುತ್ತದೆ.

ಇದನ್ನೂ ಓದಿ :ಭೀಕರ ಅಪಘಾತ: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು, 12 ಮಂದಿ ಸಾವು

ರಾಜ್ಯದಲ್ಲಿ ಅತಿ ಹೆಚ್ಚು ಪಾಕಿಸ್ತಾನಿ ಪ್ರಜೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಭಟ್ಕಳದಲ್ಲಿ 14 ಹಾಗೂ ಕಾರವಾರದಲ್ಲಿ ಒಬ್ಬರು ಸೇರಿ ಒಟ್ಟಾರೆ 15 ಮಂದಿ ವಾಸವಾಗಿದ್ದಾರೆ. ಈ ಪೈಕಿ 12 ಮಹಿಳೆಯರು ಹಾಗೂ ಮೂವರು ಮಕ್ಕಳಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್​ ಪ್ರಜೆಗಳು ವಾಸವಾಗಿದ್ದು. ಅವರೆಲ್ಲಾ ಧೀರ್ಘವದಿ ವೀಸ ಪಡೆದು ಭಾರತ ಪ್ರವೇಶಿಸಿದ್ದು. ಅವರೆಲ್ಲರ ಗಡಿಪಾರಿಗೆ ಕೇಂದ್ರ ಸರ್ಕಾರ ಸೂಚಿಸಿಲ್ಲ.  ಹೀಗಾಗಿ ಅಲ್ಪಾವದಿ ವೀಸಾ ಹೊಂದಿರುವವರನ್ನು ಮಾತ್ರ ಗಡಿಪಾರು ಮಾಡಲಾಗುತ್ತಿದೆ.

RELATED ARTICLES

Related Articles

TRENDING ARTICLES