Saturday, August 30, 2025
HomeUncategorizedಭೀಕರ ಅಪಘಾತ: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು, 12 ಮಂದಿ ಸಾವು

ಭೀಕರ ಅಪಘಾತ: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು, 12 ಮಂದಿ ಸಾವು

ಮಧ್ಯಪ್ರದೇಶ : ವೇಗವಾಗಿ ಚಲಿಸುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದಿದ್ದು. ಘಟನೆಯಲ್ಲಿ 12 ಜನ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ಈ ಭೀಕರ ಅಪಘಾತ ಸಂಭವಿಸಿದ್ದು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರ 2 ಲಕ್ಷ ಪರಿಹಾರ ಘೋಷಿಸಲಾಗಿದೆ. ಮೃತರೆಲ್ಲರೂ ನೀಮುಚ್ ಜಿಲ್ಲೆಯ ದೇವಸ್ಥಾನಕ್ಕೆ ಭೇಟಿ ನೀಡಲು ರತ್ಲಾಮ್‌ನ ಖೋಜಂಖೇಡಾ ಗ್ರಾಮದಿಂದ ಹೋಗುತ್ತಿದ್ದರು.

ಅಪಘಾತ ಸಂಭವಿಸಿದ್ದೇಗೆ..!

ಅತಿ ವೇಗದಲ್ಲಿ ಚಲಿಸುತ್ತಿದ್ದ ವ್ಯಾನ್ ಮೊದಲು ಬೈಕಿಗೆ ಡಿಕ್ಕಿ ಹೊಡೆದಿದ್ದು. ನಂತರ ಚಾಲಕನ ನಿಯಂತ್ರಣ ಕಳೆದುಕೊಂಡು ಬಾವಿಗೆ ಉರುಳಿದೆ. ಕಾರಿನ ಜೊತೆಗೆ ಬೈಕ್​ ಸವಾರನೂ ಕೂಡ ಬಾವಿಗೆ ಉರುಳಿದ್ದಾನೆ. ಬಾವಿಗೆ ತಡೆಗೋಡೆ ಇರದ ಕಾರಣ ಈ ದುರ್ಘಟನೆ ಸಂಭಸಿದ್ದು. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಡಿಐಜಿ ಮನೋಜ್ ಸಿಂಗ್ ಅಧಿಕೃತವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಟ್ಟದ ತಿರುವಿನಲ್ಲಿ ಬಸ್​ ಬ್ರೇಕ್​ಫೇಲ್​; ಪ್ರಾಣಾಪಾಯದಿಂದ ಪಾರಾದ 60 ಪ್ರಯಾಣಿಕರು

ಕಾರು ಬಾವಿಗೆ ಬಿದ್ದ ನಂತರ, ಎಲ್‌ಪಿಜಿ ಅನಿಲ ಸೋರಿಕೆ ಸಂಭವಿಸಿದೆ, ಇದು ವಾಹನದೊಳಗೆ ಸಿಲುಕಿದ್ದವರಿಗೆ ಜೀವಕ್ಕೆ ಅಪಾಯಕಾರಿ ವಾತಾವರಣಕ್ಕೆ ಕಾರಣವಾಯಿತು. ಅನಿಲ ಸೋರಿಕೆಯಿಂದ ಉಸಿರುಗಟ್ಟುವಿಕೆ ಉಂಟಾಗಿ, ಕಾರಿನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸ್ಥಳೀಯ ವ್ಯಕ್ತಿಯೊಬ್ಬರು ಸಹಾಯ ಮಾಡಲು ಎಂದು ಬಾವಿಗೆ ಇಳಿದಿದ್ದು. ಅವರು ಕೂಡು ವಿಷನೀಲ ಸೇವನೆಯಿಂದ ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ.!

ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡ 12 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಿ ಮೋದಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಸಹ ಘೋಷಿಸಲಾಗಿದೆ.

ಇದನ್ನೂ ಓದಿ :ಕಬ್ಬಡಿ ಆಟದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾ*ವು, 13 ಮಂದಿಗೆ ಗಾಯ

ಪಿಎಂಒ ಪೋಸ್ಟ್‌ನಲ್ಲಿ “ಮಧ್ಯಪ್ರದೇಶದ ಮಂಡ್ಸೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಪ್ರತಿ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು” ಎಂದು ಬರೆಯಲಾಗಿದೆ.

ಇನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್​ ಯಾದವ್​ ಕೂಡ ಈ ಕುರಿತು ಸಂತಾಪ ವ್ಯಕ್ತಪಡಿಸಿದ್ದು. ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 50,000 ರೂ. ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments