ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ವರುಣ ಅಬ್ಬರಿಸುತ್ತಿದ್ದು. ನಿನ್ನೆ ರಾತ್ರಿ ಬೆಂಗಳೂರು ಮೈಸೂರು ಮಂಡ್ಯ ಸೇರಿ ಹಲವು ಕಡೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಈ ಮಧ್ಯೆ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದ್ದು. ಮೇ. 04ರವರೆಗೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ :‘ಡಿಕೆ ಸುರೇಶ್ ನನ್ನ ಗಂಡ’ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ್ದು. ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲಗಳಲ್ಲಿ ಮಳೆಯಾಗಲಿದೆ ಮುನ್ಸೂಚನೆ ನೀಡಿದೆ.