ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು. ಬಿಯರ್ ದರವನ್ನು ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರತಿ ಬಾಟೆಲ್ ದರವನ್ನು 10 ರಿಂದ 20 ಹೆಚ್ಚಸಬಹುದೆಂದು ನಿರೀಕ್ಷಿಸಲಾಗಿದೆ.
ಬಿಯರ್ ಮೇಲಿನ ಅಬಕಾರಿ ಸುಂಕವನ್ನ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರನೇ ಬಾರಿಗೆ ಬಿಯರ್ ದರವನ್ನು ಹೆಚ್ಚಿಸಲಾಗುತ್ತಿದ್ದು. ಸರ್ಕಾರದ ನಿರ್ಧಾರಕ್ಕೆ ಮದ್ಯಪ್ರಿಯರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ :ಪಾಕ್ ವಶದಲ್ಲಿರೋ BSF ಯೋಧ: ಪತಿಗಾಗಿ ಫಿರೋಜ್‌ಪುರಕ್ಕೆ ಹೊರಟ ಗರ್ಭಿಣಿ ಪತ್ನಿ