ಚಿತ್ರದುರ್ಗ: ಕಾರಿನ ಟೈರ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ಗೆ ಡಿಕ್ಕಿಯಾಗಿದ್ದು. ಘಟನೆಯಲ್ಲಿ ಮೂರು ಮಂದಿ ಸಾವನ್ನಪ್ಪಿದ್ದು. 6 ಮಂದಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಹೊರವಲಯದ ಶಿಬಾರದ ಗೋ ಶಾಲೆ ಬಳಿ ಘಟನೆ ನಡೆದಿದ್ದು. ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಮೂಲದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಅರ್ಜುನ್ (28), ಸರವಣ್ (30) , ಶ್ರೀಧರ್(30) ಎಂದು ಗುರುತಿಸಿಲಾಗಿದೆ. ಮೃತ ಅರ್ಜುನ್ ಚನ್ನೈನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಿದ್ದರು.
ಇದನ್ನೂ ಓದಿ :ಬಸ್ನಲ್ಲಿ ನಮಾಜ್ ಮಾಡಿದ್ದಾನೆ, ಇದು ಸಿದ್ದರಾಮಯ್ಯರ ಓಲೈಕೆಯ ಪ್ರತಿಫಲ: ಆರ್.ಅಶೋಕ್
ಜೊತೆಗೆ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು. ಗಾಯಾಳುಗಳನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದ್ದು. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.