ರಾಯಚೂರು ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿ ಕಛೇರಿಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ಎರಡು ಪ್ರತ್ಯೇಕ ವರದಿಗಳು ಬಂದಿದ್ದು. ಈ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ:ಯತ್ನಾಳ್ ಸವಾಲ್ ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಶಿವಾನಂದ ಪಾಟೀಲ್
ಮೊದಲಿಗೆ ರಾಯಚೂರು ಜಿಲ್ಲಾಧಿಕಾರಿ ಕಛೇರಿಗೆ ಬಾಂಬ್ ಬೆದರಿಕೆ ಬಂದಿದ್ದು. ಈ- ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಕಛೇರಿ ಸಿಬ್ಬಂದಿಗಳು ಕಛೇರಿಯಿಂದ ಹೊರ ಬಂದಿದ್ದು. ವಿಷಯ ತಿಳಿದು ಸಿಬ್ಬಂದಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಬಂದು ತಪಾಸಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಸ್ಪೀಕರ್ ಖಾದರ್ ಜೊತೆಗೆ ನನಗೂ ಬೆದರಿಕೆ ಕರೆಗಳು ಬರುತ್ತಿವೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ ಜಿಲ್ಲಾಧಿಕಾರಿ ಕಛೇರಿಗೆ ಬೆದರಿಕೆ..!
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೂ ಕೂಡ ಬಾಂಬ್ ಬೆದರಿಕೆ ಬಂದಿದ್ದು. ಪೈಪ್ ಬಾಂಬ್ ಮೂಲಕ ಜಿಲ್ಲಾಡಳಿತ ಭವನ ಸ್ಫೋಟಿಸುತ್ತೇವೆ ಎಂಬ ಈ-ಮೇಲ್ ಬಂದಿದೆ. ತಮಿಳುನಾಡಿನ ಕೊಯಮತ್ತೂರು ಬಾಂಬ್ ಬ್ಲಾಸ್ಟ್ ಮಾದರಿಯಲ್ಲಿ ದಾಳಿ ನಡೆಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ
ಎಲ್ಲಾ ಸಿಬ್ಬಂದಿಗಳನ್ನು ಹೊರಕ್ಕೆ ಕಳುಹಿಸಲಾಗಿದ್ದು. ಬಾಂಬ್ ಪತ್ತೆ ದಳ, ಶ್ವಾನದಳದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಬೆದರಿಕೆಯಿಂದ ಜಿಲ್ಲಾಡಳಿತ ಭವನ ಆವರಣದಲ್ಲಿ ಆತಂಕ ನಿರ್ಮಾಣವಾಗಿದೆ.