Saturday, May 3, 2025

ಸುಹಾಸ್​ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಬಂದ್​: ಬಸ್​ ಸಂಚಾರ ಸ್ಥಗಿತ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ. ಬಂದ್ ಹಿನ್ನಲೆ ಉಡುಪಿ-ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್​ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ನಿನ್ನೆ ರಾತ್ರಿ ತನ್ನ ಕಾರ್​ನಲ್ಲಿ ಬಜ್ಪೆಗೆ ಬರುತ್ತಿದ್ದ ಸುಹಾಸ್​​ ಶೆಟ್ಟಿಯನ್ನು ದುಷ್ಕರ್ಮಿಗಳ ಗುಂಪೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಇದೀಗ ಘಟನೆಗೆ ಎಲ್ಲಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು. ವಿಶ್ವಹಿಂದೂ ಪರಿಷತ್​ ಮತ್ತು ಬಜರಂಗದಳ ದಕ್ಷಿಣ ಬಂದ್​ಗೆ ಕರೆ ನೀಡಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹಕ ಶರಣ್‌ ಪಂಪ್‌ ವೆಲ್‌ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ :ನಮಗಾದ ನಷ್ಟಕ್ಕೆ ಪ್ರತಿಕಾರ ಖಚಿತ: ಉಗ್ರರಾಷ್ಟ್ರಕ್ಕೆ ಅಮಿತ್ ಶಾ ಎಚ್ಚರಿಕೆ

ಉದ್ರಿಕ್ತ ಗುಂಪು ಖಾಸಗಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದು. ಇದರಿಂದ ದಕ್ಷಿಣ ಕನ್ನಡ ಬೂದಿ ಮುಚ್ಚಿದ ಕೆಂಡದಂತಾಗಿದೆ. ಉಡುಪಿಯಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್​ ಸಂಚಾರವನ್ನು ಸ್ಥಗಿತಗೊಳಿಸಿದ್ದು. ಬೆಳಿಗ್ಗೆ ಕೆಲ ಸಮಯ ಕಾರ್ಯನಿರ್ವಹಿಸಿದ ಬಸ್​ಗಳು ನಂತರ ಸಂಚಾರ ಮೊಟಕುಗೊಳಿಸಿವೆ. ಪರಿಸ್ಥಿತಿ ನೋಡಿಕೊಂಡು ಸಂಚಾರ ಪುನರಾರಂಭ ಮಾಡಲು ನಿರ್ಧರಿಸಲಾಗಿದೆ. ಇದರಿಂದ ನೂರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

RELATED ARTICLES

Related Articles

TRENDING ARTICLES