ಬೆಂಗಳೂರು : ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು. ಆಟೋದಲ್ಲಿ ಪ್ರಯಾಣಿಸುತ್ತಿದ್ದ 6 ಜನರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಭೀಕರ ಅಪಘಾತದಲ್ಲಿ ಆಟೋ ಚಾಲಕ ಶ್ರೀನಿವಾಸ(40), ಪುಟ್ಟಮ್ಮ(55) ಸಾವನ್ನಪ್ಪಿದ್ದಾರೆ. ಇನ್ನು ಆಟೋದಲ್ಲಿದ್ದ ಲೇಖನ(11) ಮತ್ತು ವರ್ಷಿಣಿ(13) ಸ್ಥಿತಿ ಗಂಭೀರವಾಗಿದೆ, ನಾಗರತ್ನಮ್ಮ(35), ವೆಂಕಟೇಶ(37) ಎಂಬುವವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ:‘ಉಗ್ರ ದಾಳಿಗೆ ಕನ್ನಡ ಕಾರಣ’ ಎಂದಿದ್ದ ಗಾಯಕ ಸೋನು ನಿಗಮ್ ವಿರುದ್ದ FIR ದಾಖಲು
ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿದ್ದರೆ, ಆಟೋ ಶಾಂತಿನಗರದಿಂದ ನೆಲಮಂಗಲಕ್ಕೆ ಹೋಗುತ್ತಿತ್ತು. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಒಂದೇ ಕುಟುಂಬದ ಆರು ಜನರು ಆಟೋದಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ಜಮೀರ್ ಅವರ ಕ್ಷೇತ್ರದಲ್ಲೇ ಆತ್ಮಾಹುತಿ ಬಾಂಬ್ ಬ್ಲಾಸ್ಟ್ ಮಾಡಿಕೊಳ್ಳಲಿ: ಮಾಜಿ ಸಿಎಂ ಸದಾನಂದ ಗೌಡ
ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಿದ್ದು, ಕ್ರೇನ್ ಮೂಲಕ ಆಟೋ ಮತ್ತು ಬಸ್‌ನ್ನು ತೆರವುಗೊಳಿಸಿ ಟ್ರಾಫಿಕ್ ನಿಯಂತ್ರಿಸಲಾಯಿತು. ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೂ, ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಲ್ಲರಬಾಣವಾಡಿ ಕ್ರಾಸ್ ಬಳಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಆಟೋ ಸಂಪೂರ್ಣ ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದೆ.