ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಗಾಯಕ ಸೋನು ನಿಗಮ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಕ್ಷಣ ವೇದಿಕೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಏಪ್ರಿಲ್ 25-26ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. ಯುವಕನೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದಕ್ಕೆ ‘ಕನ್ನಡ. ಕನ್ನಡ ಇದಕ್ಕೆ ಪಹಲ್ಗಾಮ್ನಲ್ಲಿ ದಾಳಿ ನಡೆಯಿತು ಎಂದಿದ್ದರು. ಸೋನು ನಿಗಮ್ ಈ ಹೇಳಿಕೆಗೆ ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕರವೇ ನಾರಯಣ ಗೌಡರಂತೂ ಸೋನು ನಿಗಮ್ರನ್ನು ಸಾಂಸ್ಕೃತಿಕ ಭಯೋತ್ಫಾದಕ ಎಂದು ಹೇಳಿದ್ದರು.
ಇದನ್ನೂ ಓದಿ:Viral Video: ಪ್ರೇಯಸಿ ಜೊತೆ ನೂಡಲ್ಸ್ ತಿನ್ನುತ್ತಿದ್ದ ಮಗನಿಗೆ ಚಪ್ಪಲಿಯಲ್ಲಿ ಹೊಡೆದ ಪೋಷಕರು
ಇದೀಗ ಕರ್ನಾಟಕ ರಕ್ಷಣ ವೇದಿಕೆ ನೀಡಿದ ದೂರಿನ ಆಧಾರದ ಮೇಳೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ದ ಎಫ್ಐಆರ್ ದಾಖಲಾಗಿದ್ದು. ಬಿಎನ್ಎಸ್ ಸೆಕ್ಷನ್ 352ರ ಅಡಿ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.