ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದದ ಕಾರ್ಮೋಡ ಆವರಿಸಿದ್ದು. ಇದರ ಬೆನ್ನಲ್ಲೇ ದೇಶದಾದ್ಯಂತ ಮಾಕ್ ಡ್ರಿಲ್ ನಡೆಸುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ. ಸೂಚನೆ ಅನ್ವಯ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ‘ಆಪರೇಷನ್ ಅಭ್ಯಾಸ್’ ಹೆಸರಿನಲ್ಲಿ ಮಾಕ್ ಡ್ರಿಲ್ ಕೈಗೊಳ್ಳಲಾಗಿದೆ.
54 ವರ್ಷಗಳ ಬಳಿಕೆ ಮಾಕ್ಡ್ರಿಲ್..!
54 ವರ್ಷದ ಬಳಿಕ ದೇಶದಲ್ಲಿ ರಕ್ಷಣಾ ಮಾಕ್ ಡ್ರಿಲ್ ನಡೆಸಲು ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ವಿಶೇಷವಾಗಿದೆ. ಪ್ರಮುಖವಾಗಿ ಕೇಂದ್ರ ಸರ್ಕಾರದಿಂದ ಉತ್ತರ ಭಾರತದ ರಾಜ್ಯಗಳಿಗೆ ಈ ಸೂಚನೆ ನೀಡಲಾಗಿದೆ. 1971ರಲ್ಲಿ ಭಾರತ, ಪಾಕಿಸ್ತಾನ ನಡುವೆ ಯುದ್ಧ ನಡೆದಾಗ ಈ ರಕ್ಷಣಾ ಮಾಕ್ ಡ್ರಿಲ್ ನಡೆಸಲಾಗಿತ್ತು.
ಇದನ್ನೂ ಓದಿ :ಗೆದ್ದಿದ್ದೀವಿ ಅನ್ನೋ ಖುಷಿ ಬೇಡ, ಅಕ್ಕ-ಪಕ್ಕದಲ್ಲಿರುವವರ ಬಗ್ಗೆ ಎಚ್ಚರಿಕೆ ಇರಲಿ: ಕುಮಾರ್ ಬಂಗಾರಪ್ಪ
ಆದಾದ ಬಳಿಕ ಎಂದೂ ಕೂಡ ದೇಶದಲ್ಲಿ ರಕ್ಷಣಾ ಮಾಕ್ ಡ್ರಿಲ್ ನಡೆಸಿಲ್ಲ. ಕಾರ್ಗಿಲ್ ಯುದ್ಧದ ವೇಳೆಯೂ ಮಾಕ್ ಡ್ರಿಲ್ ನಡೆಸಿರಲಿಲ್ಲ. ಪಹಲ್ಗಾಮ್ ನರಮೇಧದ ಬಳಿಕ ಭಾರತದ ಪ್ರತೀಕಾರದ ದಾಳಿಯ ಬಳಿಕ ಪಾಕ್ ಕೂಡ ಪ್ರತಿದಾಳಿ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ರಕ್ಷಣಾ ಮಾಕ್ ಡ್ರಿಲ್‌ಗೆ ಕೇಂದ್ರದಿಂದ ಸೂಚನೆ ಸಿಕ್ಕಿದೆ.
ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮೊಳಗಿತು ಸೈರನ್..!
ಬೆಂಗಳೂರಿನ 35 ಸ್ಥಳಗಳಲ್ಲಿ ಸೈರನ್ ಮೊಳಗಿದ್ದು. ಇಂಡಿಯನ್ ಇನ್ಸ್ಟಿಟ್ಯೂಟ್, ಸಿಕ್ಯುಎಎಲ್, ಇಎಸ್ಐ ಆಸ್ಪತ್ರೆ, ಎನ್ಎಎಲ್, ಬೆಂಗಳೂರು ಡೈರಿ, ಕೆನರಾ ಬ್ಯಾಂಕ್, SRS ಪೀಣ್ಯ, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಬಾಣಸವಾಡಿ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಠಾಣೆ.
ಇದನ್ನೂ ಓದಿ:‘ಆಪರೇಷನ್ ಸಿಂಧೂರ್’ ಕೇವಲ ಧ್ಯೇಯವಲ್ಲ, ಇದೊಂದು ಪವಿತ್ರ ಪ್ರತಿಜ್ಞೆ: ನಟ ಸುದೀಪ್
ಉಪ್ಪಾರಪೇಟೆ ಪೊಲೀಸ್ ಠಾಣೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಠಾಣೆ, ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆ, ವೈಯಾಲಿಕಾವಲ್ ಠಾಣೆ, ಹಲಸೂರು ಗೃಹರಕ್ಷಕದಳ ಕೇಂದ್ರ ಕಚೇರಿ, ಪೀಣ್ಯ ಅಗ್ನಿಶಾಮಕ ಠಾಣೆ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕದಳ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಅಂಜನಾಪುರ ಅಗ್ನಿಶಾಮಕ ಠಾಣೆ, ITPL ಅಗ್ನಿಶಾಮಕ ಠಾಣೆ, ಸರ್ಜಾಪುರ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ ಅಗ್ನಿಶಾಮಕ ಠಾಣೆ ಮತ್ತು ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆಯಲ್ಲಿ ಸೈರನ್ ಮೊಳಗಿದೆ.