ಇಸ್ಲಾಮಬಾದ್ : ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಚರಣೆ ನಡೆಸಿದ್ದು. ಸುಮಾರು 25 ನಿಮಿಷಗಳ ಕಾಲ ನಡೆದ ಕಾರ್ಯಚರಣೆಯಲ್ಲಿ ಪಾಕಿಸ್ತಾನದ 9 ಉಗ್ರರ ಅಡಗು ತಾಣಗಳನ್ನು ನಾಶಪಡಿಸಲಾಗಿದೆ. ಈ ಕಾರ್ಯಚರಣೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದು. ಇದರಲ್ಲಿ ಕುಖ್ಯಾತ ಉಗ್ರ ಮಸೂದ್ ಅಜರ್ ಕುಟುಂಬದ 14 ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪಹಲ್ಗಾಮ್ ದಾಳಿ ನಡೆದು ಸರಿಯಾಗಿ 15 ದಿನಗಳ ನಂತರ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಕಾರ್ಯಚರಣೆ ನಡೆಸಿದ್ದು. 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದೆ. ಈ ಕಾರ್ಯಚರಣೆಯಲ್ಲಿ ಜೈಶ್ ಇ- ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕ, ವಿಶ್ವದ ಕುಖ್ಯಾತ ಉಗ್ರ ಮಸೂದ್ ಅಜರ್ ಕುಟುಂಬದ 14 ಸದಸ್ಯರು ಸಾವನ್ನಪ್ಪಿದ್ದಾರೆ. ಈ 14 ಮಂದಿಯಲ್ಲಿ ಮಸೂದ್ ಅಜರ್ ಮಗ ರೌಪ್ ಅಸ್ಗರ್ ಕೂಡ ಸಾವನ್ನಪ್ಪಿದ್ದಾನೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ :‘ನಮ್ಮ ಸಹೋದರರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಉತ್ತರ’: ಸೇನೆಗೆ ಅಮಿತ್ ಶಾ ಶ್ಲಾಘನೆ
ಭಯೋತ್ಪಾದಕ ಮಸೂದ್ ಪಾಕಿಸ್ತಾನದಲ್ಲಿ ಕುಳಿತುಕೊಂಡು ಭಾರತದ ವಿರುದ್ಧ ನಿರಂತರವಾಗಿ ಭಯೋತ್ಪಾದಕ ಪಿತೂರಿಗಳನ್ನು ರೂಪಿಸುತ್ತಿದ್ದಾನೆ. ಆದರೆ ಈಗ ಭಾರತವು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದೆ ಮತ್ತು ಈ ವಿಶೇಷ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನದ 9 ಸ್ಥಳಗಳ ಮೇಲೆ ವಾಯುದಾಳಿ ನಡೆಸಿದೆ. ಇದು ಮಸೂದ್ ಕುಟುಂಬದ ಅಂತ್ಯ. ಯಾರೆಲ್ಲಾ ಕೊಲ್ಲಲ್ಪಟ್ಟರು ಎಂಬುದರ ಕುರಿತು ಶೀಘ್ರದಲ್ಲೇ ಪೂರ್ಣ ಮಾಹಿತಿ ಬಹಿರಂಗಗೊಳ್ಳಲಿದೆ.