ದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಕೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನೂರಾರು ಉಗ್ರರು ಹತರಾಗಿದ್ದಾರೆ. ಇದರ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು. ಈ ದಾಳಿಯಲ್ಲಿ ಭಾರತದ 7 ನಾಗರಿಕರು ಸಾವನ್ನಪ್ಪಿದ್ದು, 38 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ, ಪಾಕಿಸ್ತಾನ ಪಡೆಗಳ ಕದನ ವಿರಾಮ ಉಲ್ಲಂಘನೆಗಳಿಗೆ ಭಾರತೀಯ ಸೇನೆಯು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ಹಣೆಗೆ ಸಿಂಧೂರವಿಟ್ಟುಕೊಂಡು ‘ಆಪರೇಷನ್ ಸಿಂಧೂರ’ದ ಬಗ್ಗೆ ಸಿಎಂ ಸುದ್ದಿಗೋಷ್ಟಿ; ಕೇಂದ್ರಕ್ಕೆ ಬೆಂಬಲ
ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸೇರಿದಂತೆ ಹಲವೆಡೆ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯಾಗಿದ್ದು. ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನದಿಂದ ನಡೆದ ಗುಂಡಿನ ದಾಳಿಗೆ 7 ನಾಗರಿಕರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೆ, ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಹತ್ತು ಜನರು ಗಾಯಗೊಂಡಿದ್ದಾರೆ ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.