ಆಪರೇಷನ್ ಸಿಂಧೂರದ ನಂತರ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉದ್ವಿಘ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಇದರ ನಡುವೆ ಗಡಿ ಪ್ರದೇಶದಲ್ಲಿದ್ದ ಜನರನ್ನು ನಿರಾಶ್ರಿತರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇಂದು ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ ಕೆಲ ಕಾಲ ಅಲ್ಲಿದ್ದ ಮಕ್ಕಳೊಂದಿಗೆ ಕ್ರಿಕೆಟ್ ಆಟವಾಡಿದರು.
ಸಾಂಬಾದಲ್ಲಿನ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಸ್ಥಳೀಯರನ್ನು ಭೇಟಿಯಾದ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಅವರು ಪುಟ್ಟ ಬಾಲಕನೊಂದಿಗೆ ಕ್ರಿಕೆಟ್ ಆಡಿದ್ದು, ಅವರು ಬ್ಯಾಟ್ ಬೀಸಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಇದೀಗ ಹರಿದಾಡುತ್ತಿವೆ. ಈ ವಿಡಿಯೋಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ :ದೇಶ ದ್ರೋಹಿ ಪೋಸ್ಟ್: ‘ಸಿಂಧೂರ’ಕ್ಕೆ ಧಿಕ್ಕಾರ ಎಂದಿದ್ದ ಕರಾವಳಿ ಯುವತಿ ಮೇಲೆ ನೆಟ್ಟಿಗರ ಆಕ್ರೋಶ
ಗುರುವಾರ ರಾತ್ರಿ ಜಮ್ಮು&ಕಾಶ್ಮೀರದ ಪೂಂಚ್ ಜಿಲ್ಲೆಗಳಲ್ಲಿ ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ನಡೆಸಿತ್ತು. ಇದನ್ನು ಓಮರ್ ಅಬ್ದುಲ್ಲಾ ತೀವ್ರವಾಗಿ ಖಂಡಿಸಿದ್ದರು. ಪಾಕ್ ಉಗ್ರರು ನಮ್ಮ ಜನರ ಮೇಲೆ ದಾಳಿ ನಡೆಸಿ ಅಮಾಯಕರನ್ನ ಕೊಂದರು. ಅವರ ಈ ದಾಳಿಗೆ ನಾವು ಪ್ರತಿಕ್ರಿಯಿಸಬೇಕಾಯಿತು ಎಂದು ಒಮರ್ ಅಬ್ದುಲ್ಲಾ ಹೇಳಿಕೊಂಡಿದ್ದರು.
ಇದನ್ನೂ ಓದಿ :300 ರಿಂದ 400 ಡ್ರೋನ್ ಬಳಸಿ ಪಾಕ್ ದಾಳಿ ನಡೆಸಿದೆ, ಇಬ್ಬರು ವಿದ್ಯಾರ್ಥಿಗಳ ಸಾವು: ವಿದೇಶಾಂಗ ಇಲಾಖೆ
ಗುರುವಾರ ರಾತ್ರಿ ಪಾಕಿಸ್ತಾನದ ಸಶಸ್ತ್ರ ಪಡೆಗಳು ಡ್ರೋನ್ ಹಾಗೂ ಕ್ಷಿಪಣಿ ದಾಳಿಗೆ ಮುಂದಾಗಿತ್ತು. ಈ ವೇಳೆ ನಮ್ಮ ಸೇನೆಯು ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಮತ್ತು ಗುಜರಾತ್‌ನ ಪಟ್ಟಣಗಳಲ್ಲಿ ಸೈರನ್ ಮೊಳಗಿಸಿ ಜನರಿಗೆ ಮುನ್ನೆಚ್ಚರಿಕೆ ನೀಡಿತು. ಅಲ್ಲದೇ ಪಾಕ್‌ನ ಡ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಯಿತು ಎಂದು ಹೇಳಿದರು.