ದೆಹಲಿ : ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಆಪರೇಷನ್ ಸಿಂಧೂರದ ನಂತರ ಮೊದಲ ಬಾರಿಗೆ ಭಾರತದ ಮಿಲಿಟರಿ ಕಾರ್ಯಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯುಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ಏರ್ ಮಾರ್ಷಲ್ ಎ.ಕೆ. ಭಾರ್ತಿ, ನೌಕಾಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ವೈಸ್ ಅಡ್ಮಿರಲ್ ಪ್ರಮೋದ್ ಸುದ್ದಿಗೋಷ್ಟಿಯಲ್ಲಿ ಪಾಲ್ಗೊಂಡು ಪಾಕಿಸ್ತಾನದ ಉಗ್ರ ನೆಲೆಗಳನ್ನು ನಾಶ ಮಾಡಿರುವುದಕ್ಕೆ ಸಾಕ್ಷ್ಯಗಳನ್ನೂ ಪ್ರಸ್ತುತಪಡಿಸಿದರು.
ಇದನ್ನೂ ಓದಿ :ಮಧ್ಯಸ್ಥಿಕೆ ವಹಿಸಲು ಟ್ರಂಪ್ ಯಾರು: ಮೋದಿ ವಿರುದ್ದ ಅಸಮಧಾನ ಹೊರಹಾಕಿದ ಬಸವರಾಜ್ ಹೊರಟ್ಟಿ
ನಾಲ್ಕು ದಿನಗಳ ಹಿಂದೆ ಮೇ 7ರಂದು ಭಾರತ ನಡೆಸಿದ ಆಪರೇಷನ್ ಸಿಂದೂರ್ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಾಹಿತಿ ನೀಡಿದ ಅಧಿಕಾರಿಗಳು. ಆಪರೇಷನ್ ಸಿಂದೂರ್ನಲ್ಲಿ ಹಲವು ಉಗ್ರರನ್ನು ಕೊಲ್ಲಲಾಗಿದೆ. ಲಷ್ಕರೆ ತೈಯಬಾದ ಮುದಾಸಿರ್, ಜೈಷೆ ಸಂಘಟನೆಯ ಉಗ್ರ ಹಫೀಜ್ ಮೊಹಮ್ಮದ್, ಬಹಾವಲ್ಪುರದ ಮರ್ಕಜ್ ಸಭಾನಲ್ಲಾದ ಉಸ್ತುವಾರಿ ಜಮೀಲ್, ಲಷ್ಕರೆ ತೈಬಾ ಉಗ್ರ ಖಾಲಿದ್ ಮೊದಲಾದವರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದಾರೆ. ಭಾರತವು ಪಾಕಿಸ್ತಾನದ ನಾಗರಿಕರನ್ನು ಗುರಿಯಾಗಿಸಿ ಯಾವುದೇ ದಾಳಿ ಮಾಡಿಲ್ಲ. ಆದರೆ, ಪಾಕಿಸ್ತಾನವು ಭಾರತದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ ಎಂದರು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮಾಧ್ಯಮಗಳಿಗೆ ತಿಳಿಸಿದರು.