ಯಾದಗಿರಿ : ಪಾಕಿಸ್ತಾನದ ಪರ ಬೆಂಬಲವಾಗಿ ಪೋಸ್ಟ್ ಹಾಕಿದ್ದಾನೆ ಎಂದು ಆರೋಪಿಸಿ ಯುವಕರ ಗುಂಪೊಂದು ಆತನ ಎಗ್ರೈಸ್ ಅಂಗಡಿಯನ್ನ ಸುಟ್ಟು ಹಾಕಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಇದನ್ನೂ ಓದಿ :ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್ ಒತ್ತಾಯ: ಕದನ ವಿರಾಮದ ಬಗ್ಗೆ ಚರ್ಚೆ
ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ, ರಾಜನಕೊಳ್ಳುರು ಗ್ರಾಮದಲ್ಲಿ ಘಟನೆ ನಡೆದಿದ್ದು. ಮೀರ್ಸಾಬ್ ಎಗ್ರೈಸ್ ಬಂಡಿ ಇಟ್ಟುಕೊಂಡು ಜೀವನದ ಬಂಡಿಯನ್ನ ತಳ್ಳುತ್ತಿದ್ದ. ಆದರೆ ಕೆಲ ಯುವಕರು ಆತ ಪಾಕಿಸ್ತಾನದ ಪರ ಸ್ಟೇಟಸ್ ಹಾಕಿದ್ದಾನೆ ಎಂದು ಆರೋಪಿಸಿ ಆತನ ಎಗ್ರೈಸ್ ಬಂಡಿಗೆ ಬೆಂಕಿ ಹಚ್ಚಿದ್ದಾರೆ.
ಇದನ್ನೂ ಓದಿ :“ರಾಕಿ ಭಾಯ್ ನಿಯಂತ್ರಿಸಲಾಗದ ಶಕ್ತಿ”: KGF ಚಾಪ್ಟರ್ 3 ಬಗ್ಗೆ ಸುಳಿವು ಕೊಟ್ಟ ಹೊಂಬಾಳೆ
ಯಾದಗಿರಿಯ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಈ ಕುರಿತು ಇನ್ನು ಯಾವುದೇ ಪ್ರಕರಣ ದಾಖಲಾಗಿಲ್ಲ. ಕೆಲ ದಿನಗಳ ಹಿಂದಷ್ಟೆ ಮಂಗಳೂರಿನಲ್ಲಿ ಮುಸ್ಲಿಂ ಯುವಕನೊಬ್ಬ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ ಎಂದು ಆರೋಪಿಸಿ ಆತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸುಮಾರು 17ಕ್ಕೂ ಹೆಚ್ಚು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.