ʻಕಾಮಿಡಿ ಕಿಲಾಡಿʼ ಸೀಸನ್ 3ರ ವಿನ್ನರ್, ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವನ್ನಪ್ಪಿದ್ದು. ರಾಕೇಶ ಪೂಜಾರಿ ಸಾವಿಗೆ ನಟಿ ರಕ್ಷಿತಾ ಕಂಬನಿ ಮಿಡಿದಿದ್ದಾರೆ. ‘ನಗುಮುಖದ ರಾಕೇಶ್, ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ’.
ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿನ್ನೆ ರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದು, ಅವರ ಸ್ನೇಹಿತರು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಕೇಶ ಬೆಳಗಿನ ಜಾವ 3:30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ :ಏಕಾಂತದಲ್ಲಿ ಧ್ಯಾನ ಮಾಡುವ ಹವ್ಯಾಸ: ಕಾವೇರಿ ನದಿಗೆ ಬಿದ್ದು ಪದ್ಮಶ್ರೀ ವಿಜೇತ ವಿಜ್ಞಾನಿ ಸಾ*ವು
ರಾಕೇಶ ಪೂಜಾರಿ ಅಗಲಿಕೆಗೆ ನಟಿ ಮತ್ತು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಜಡ್ಜ್ ಆಗಿರುವ ರಕ್ಷಿತಾ ಪ್ರೇಮ್ ಭಾವುಕ ಪೋಸ್ಟ್ವೊಂದನ್ನು ಹಾಕಿದ್ದು. ‘ನಗುಮುಖದ ರಾಕೇಶ್, ನನ್ನ ನೆಚ್ಚಿನ ವ್ಯಕ್ತಿ. ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ. ನಾನು ಇನ್ನೂ ಎಂದಿಂಗೂ ರಾಕೇಶ್ ಅವರನ್ನು ಮಾತನಾಡಿಸಲು ಸಾಧ್ಯವಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಕಷ್ಟವಾಗ್ತಿದೆ. ಇದನ್ನೂ ಓದಿ :ಕದನ ವಿರಾಮ: ವಿಶೇಷ ಅಧಿವೇಶನ ಕರೆಯುವಂತೆ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ