ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಜೊತೆ ಸಂಪರ್ಕ ಹೊಂದಿದ್ದ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಈ ಕುರಿತು ಭಾರತೀಯ ಸೇನೆ ಅಧಿಕೃತವಾಗಿ ತಮ್ಮ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಮಂಗಳವಾರ ಶೋಪಿಯಾನ್ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಬೀಡುಬಿಟ್ಟಿದ್ದಾರೆ ಎಂಬ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
OPERATION KELLER
On 13 May 2025, based on specific intelligence of a #RashtriyasRifles Unit, about presence of terrorists in general area Shoekal Keller, #Shopian, #IndianArmy launched a search and destroy Operation. During the operation, terrorists opened heavy fire and fierce… pic.twitter.com/KZwIkEGiLF
— ADG PI – INDIAN ARMY (@adgpi) May 13, 2025
ಇದನ್ನೂ ಓದಿ :ಪಾಕ್ಗೆ ಪಾಠ ಕಲಿಸಿದ ಯೋಧರನ್ನು ಭೇಟಿಯಾದ ಮೋದಿ: ಭಾರತ ಮಾತೆಗೆ ಜೈಕಾರ
ಭದ್ರತಾ ಸಿಬ್ಬಂದಿಯ ಪ್ರಕಾರ, ಕೆಲವು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಕೆಲ್ಲಾರ್ ಅರಣ್ಯದಲ್ಲಿ ಬೃಹತ್ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಆದರೆ ಈ ವೇಳೆ ಪೊಲೀಸರು ಮತ್ತು ಸೇನೆಯ ಮೇಲೆ ಅಡಗಿಕೊಂಡಿದ್ದ ಭಯೋತ್ಪಾದಕರು ಗುಂಡು ಹಾರಿಸಿದ್ದು. ಈ ವೇಳೆ ಗುಂಡಿನ ಚಕಮಕಿ ನಡೆದು ಮೂವರು LeT ಉಗ್ರರು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು. ಪಹಲ್ಗಾಮ್ನಲ್ಲಿ ದಾಳಿ ನಡೆಸಿದ ಉಗ್ರರು ಇವರೇನಾ ಎಂಬ ಸಂಶಯ ಮೂಡಿದೆ.